ಮುಂಡಗೋಡ : ಮತ್ತೆ ಮೂವರು ಮಕ್ಕಳಿಗೆ ಹುಚ್ಚುನಾಯಿ ಕಡಿತ..!
ಮುಂಡಗೋಡ : ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದ ಘಟನೆ ಎಂದು ಪಟ್ಟಣದ ನಂದೀಶ ನಗರದಲ್ಲಿ ರವಿವಾರ ಸಂಭವಿಸಿದೆ ಅರುಣಿತಾ…
ಮುಂಡಗೋಡ : ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದ ಘಟನೆ ಎಂದು ಪಟ್ಟಣದ ನಂದೀಶ ನಗರದಲ್ಲಿ ರವಿವಾರ ಸಂಭವಿಸಿದೆ ಅರುಣಿತಾ ಮಹೇಶ ಪಾಟೀಲ್(3), ನಂದೀಶ ಶಾಂತಪ್ಪ ಹಂಚಿನಮನಿ(9), ಚಿರಂಜೀವಿ ಸುನೀಲ ಮತ್ತಿಗಟ್ಟಿ(5) ಇವರಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಮುಂಡಗೋಡ ತಾಲೂಕ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಕಳೆದ ರವಿವಾರ ಕೂಡ ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು ಪಟ್ಟಣದಲ್ಲಿ ಬೀದಿ ನಾಯಿ ಹಾಗೂ ಹುಚ್ಚುನಾಯಿ ಹಾವಳಿ ಹೆಚ್ಚಾಗಿದೆ. ಪಟ್ಟಣ ಪಂಚಾಯತದವರು ಕೂಡಲೇ…
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷ (2025-26)ದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂ.2 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ಬಳಿಕದ ಮೊದಲ ಕಾರ್ಯನಿರತ ದಿನದಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ಮೇ 22ರಿಂದ ದ್ವಿತೀಯ ಪಿಯುಸಿ ದಾಖಲಾತಿ ಆರಂಭವಾಗಲಿವೆ. ಮೊದಲನೇ ಅವಧಿ ಜೂ.2ರಿಂದ ಸೆ.21ರವರೆಗೆ ಇರಲಿದ್ದು, ಎರಡನೇ ಅವಧಿ ಅಕ್ಟೋಬರ್ 8 ರಿಂದ 2026ರ ಮಾ.31ರವರೆಗೆ ನಡೆಯಲಿದೆ. ಮಧ್ಯಂತರ ರಜೆ ಸೆ.22 ರಿಂದ ಅ.7ರವರೆಗೆ…
ಮಹಾರಾಷ್ಟ್ರ : ಕರ್ನಾಟಕದಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9:10 ರ ಸುಮಾರಿಗೆ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದಾರೆ ಎಂದು ಸರ್ನಾಯಕ್ ಹೇಳಿದರು. ಈ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ…
ಶಿರಸಿ : ರಾಜ್ಯದ ಪ್ರತಿಷ್ಠಿತ ಉತ್ಸವಗಳಲ್ಲಿ ಒಂದಾದ ಕದಂಬೋತ್ಸವ ಏಪ್ರಿಲ್ 12 ಮತ್ತು 13ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ಜರುಗಲಿದೆ. ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ನಗರದ ಆಡಳಿತ ಸೌಧದಲ್ಲಿ ಶನಿವಾರ ಕದಂಬೋತ್ಸವ ದಿನ ನಿಗದಿ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಉತ್ಸವದ ದಿನಾಂಕ ಘೋಷಿಸಿದರು.ನಂತರ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್, ಎರಡು ದಿನ ಕದಂಬೋತ್ಸವ ನಡೆಯಲಿದೆ. ಇದಕ್ಕೆ ಪೂರಕವಾಗಿ ಏ.10ರಂದು ಗುಡ್ನಾಪುರ ರಾಣಿ ನಿವಾಸದಲ್ಲಿ ಕದಂಬ ಜ್ಯೋತಿಗೆ ಚಾಲನೆ ನೀಡಲಾಗುವುದು. ಇದರ ಭಾಗವಾಗಿ…
ಪ್ರಯಾಗ್ ರಾಜ್ : 2025 ರ ಮಹಾ ಕುಂಭ ಮೇಳವು ಈಗ ಮುಕ್ತಾಯದತ್ತ ಸಾಗುತ್ತಿದೆ. ಈ ಮಹಾ ಕುಂಭದಲ್ಲಿ ಅನೇಕ ಋಷಿಮುನಿಗಳು ಮತ್ತು ಸಂತರು ಚರ್ಚೆಯಲ್ಲಿದ್ದರು. ಈ ನಡುವೆ 100 ವರ್ಷಕ್ಕೂ ಹೆಚ್ಚು ವಯಸ್ಸಿನ ಸಂತರೊಬ್ಬರು ಭಾರತ ಮತ್ತು ಪ್ರಪಂಚದ ಭವಿಷ್ಯವಾಣಿ ನುಡಿದಿದ್ದಾರೆ. ಭಾರತವು ಮಹಾಶಕ್ತಿಯಾಗಲಿದೆ. ಮೂರನೇ ಮಹಾಯುದ್ಧದ ನಂತರ ಭಾರತವು ಸೂಪರ್ ಪವರ್ ಆಗಿ ಹೊರಹೊಮ್ಮುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಮಹಾಯುದ್ಧದ ನಂತರ, ಭಾರತ ಸೇರಿದಂತೆ ಇಡೀ ಜಗತ್ತಿನಲ್ಲಿ ಕೇವಲ 65 ಕೋಟಿ ಹಿಂದೂಗಳು…
ಬೆಂಗಳೂರು: ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಸವರಾಜ ಬೊಮ್ಮಾಯಿ ಅವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ…
ಬೆಂಗಳೂರು: ಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ- ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜೊತೆ ಚರ್ಚೆ…
ಬೆಂಗಳೂರು: ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.ಈ ಮೊದಲು ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು….
ನವದೆಹಲಿ: ವಿದೇಶಿ ವೈದ್ಯಕೀಯ ಸಂಸ್ಥೆಗಳಿಂದ ಎಂಬಿಬಿಎಸ್ ಪದವಿ ಪಡೆಯಲು ಭಾರತೀಯ ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ನಿರ್ಧಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ), ಈ ಹಿಂದೆ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಪರಿಚಯಿಸಿದ ನಿಯಂತ್ರಣವನ್ನು ಬೆಂಬಲಿಸುತ್ತದೆ, ಇದು ವಿದ್ಯಾರ್ಥಿಗಳು ವಿದೇಶದ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯುವ ಮೊದಲು ನೀಟ್-ಯುಜಿ ತೇರ್ಗಡೆಯಾಗಿರಬೇಕು. ಸಾಗರೋತ್ತರ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್-ಯುಜಿ ಕಡ್ಡಾಯ…
ಮುಂಡಗೋಡ : ತಾಲೂಕಿನಾದ್ಯಂತ ಅನಧಿಕೃತ ಇಟ್ಟಂಗಿ ಭಟ್ಟಿಗಳ ಹಾವಳಿ ಹೆಚ್ಚಾಗಿದೆ. ತಹಶೀಲ್ದಾರರು ಅನಧಿಕೃತ ಇಟ್ಟಂಗಿ ಭಟ್ಟಿಗಳ ಮೇಲೆ ದಾಳಿ ನಡೆಸಿ ನೋಟಿಸ್ ಕೂಡ ನೀಡಿದ್ದಾರೆ. ಈ ನಡುವೆ ಪತ್ರಕರ್ತರೊಬ್ಬರು ಸಿಕ್ಕಿದ್ದೇ ಛಾನ್ಸ್ ಎಂದುಕೊಂಡು ಅನಧಿಕೃತ ಇಟ್ಟಂಗಿಯ ಭಟ್ಟಿಗಳಿಗೆ ಭೇಟಿ ನೀಡಿ ಫೋಟೋ ಕ್ಲಿಕ್ಕಿಸಿಕೊಂಡು ಪೇಪರ್ ನಲ್ಲಿ ಹಾಕಿದರೆ ನಿಮ್ಮ ಮೇಲೆ ಕೇಸ್ ಆಗುತ್ತದೆ ಎಂದು ಹೆದರಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ. ನಂತರ ಒಂದಲ್ಲ ಎರಡಲ್ಲಾ ಬರೋಬ್ಬರಿ 25ಸಾವಿರರೂ. ಕೇಳಿದಾಗ ಇಟ್ಟಂಗಿ ಭಟ್ಟಿ ಮಾಲೀಕರು ಹೌಹಾರಿದರು..!ಈಗ ಇಟ್ಟಂಗಿ ಭಟ್ಟಿ…