ಗುಂಡಿಯಲ್ಲಿ ಬಿದ್ದ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು
ಮುಂಡಗೋಡ : ಮುಂಡಗೋಡ ಸರ್ಕಾರಿ ಆಸ್ಪತ್ರೆಯ ಹಾಳು ಬಿದ್ದ ಶೌಚಾಲಯದ ಗುಂಡಿಯಲ್ಲಿ ಬಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ…
ಮುಂಡಗೋಡ : ಮುಂಡಗೋಡ ಸರ್ಕಾರಿ ಆಸ್ಪತ್ರೆಯ ಹಾಳು ಬಿದ್ದ ಶೌಚಾಲಯದ ಗುಂಡಿಯಲ್ಲಿ ಬಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. ಈ ಕಾರ್ಯಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಪ್ಪ ಪೂಜಾರ, ಪ್ರಮುಖ ಅಗ್ನಿಶಾಮಕ ನಾಗರಾಜ ಮೂಲಿಮನಿ, ಮಲ್ಲಿಕಾರ್ಜುನ ಮಲ್ಲಿಗವಾಡ, ವೆಂಕಟೇಶ ಪಿ., ಮಹಾಬಲೇಶ್ವರ ಶಿವನಗುಡಿ, ಅಡಿವೆಪ್ಪ ಕರುವಿನಕೊಪ್ಪ, ಹರೀಶ ಪಟಗಾರ, ದುರ್ಗಪ್ಪ ಹರಿಜನ, ಚಮನಸಾಬ ನದಾಫ ಇದ್ದರು.
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಾಣದ ಬಳಿ ರವಿವಾರ ಬೆಳಗ್ಗೆ 11.59ಕ್ಕೆ ಭೂ ಕಂಪನವಾಗಿದೆ. ಭೂಮಿಯ 5ಕಿಮೀ ಆಳದಲ್ಲಿ ಕಂಪನವಾಗಿದೆ. ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟಿನಲ್ಲಿ ಭೂ ಕಂಪನದ ಬಗ್ಗೆ ದಾಖಲಾಗಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಭೂ ಕಂಪನ ಆಗಿರುವುದನ್ನು ಅಲ್ಲಗಳೆದಿದೆ..! ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಕುಮಟಾ ತಾಲೂಕಿನ ಕೆಲ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆದ ಬಗ್ಗೆ ಜನ ಸಾಕಷ್ಟು ಪ್ರಮಾಣದಲ್ಲಿ ಚರ್ಚಿಸಿದ್ದರು. ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದವರು ಭೂಕಂಪನದ…
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ಶೋಕಾಸ್ ನೋಟಿಸ್ ನೀಡಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ…
ಕಾರವಾರ : ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ ನಾರಾಯಣ ಬೆಳಗಾಂವಕರ್ (13) ಸಾವಿಗಿಡಾದ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ.ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು…
ಮುಂಡಗೋಡ : ಮುಂಡಗೋಡ ಪಟ್ಟಣ ಪಂಚಾಯಿತಿ ಸಿಬ್ಬಂದಿ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅವರನ್ನು ರಿಲೀವ್ ಮಾಡಲಾಗಿದೆ. ಹಲವಾರು ವರ್ಷಗಳಿಂದ ಸಿಬ್ಬಂದಿ ಂಜುನಾಥ ಮುಚ್ಚಂಡಿ ಮೇಲೆ ಸಾರ್ವಜನಿಕರು ದೂರಿನ ಸುರಿಮಳೆಯನ್ನೇ ಸುರಿಸಿದ್ದರು. ಆದರೂ ಅವರು ರಾಜಕೀಯ ಒತ್ತಡದಿಂದ ಇಲ್ಲಿ ಇರಲು ಯಶಸ್ವಿಯಾಗಿದ್ದರು. ಆದರೆ ಕೆಲವು ತಿಂಗಳ ಹಿಂದೆ ಮಂಜುನಾಥ ಮುಚ್ಚಂಡಿ ಇಲ್ಲಿಂದ ವರ್ಗಾವಣೆಯಾಗಿತ್ತು. ಆದರೂ ಕೂಡ ಮಂಜುನಾಥ ಮುಚ್ಚಂಡಿ ಇಲ್ಲಿಂದ ರಿಲೀವ್ ಮಾಡದಂತೆ ತಡೆಯೊಡ್ಡಿದ್ದರು.ಆದರೆ ಇದೀಗ ಬ್ರೇಕಿಂಗ್ ನ್ಯೂಸ್ ಬಂದಿದ್ದು, ವರ್ಗಾವಣೆಗೊಂಡಿದ್ದ ಪಟ್ಟಣ ಪಂಚಾಯತಿ ಬಿಲ್ ಕಲೆಕ್ಟರ್…
ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿದ್ದು, ಇಂದು ಮಾಜಿ ಶಾಸಕರು, ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ, ಮಾಜಿ ಶಾಸಕರುಗಳಾದಂತಹ ಎಂಪಿ ರೇಣುಕಾಚಾರ್ಯ, ಬಿಸಿ ಪಾಟೀಲ್ ಮಾಡಾಳ್ ವಿರೂಪಾಕ್ಷಪ್ಪ ಹಲವರು ಯಡಿಯೂರಪ್ಪ ಅವರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಈ ಸಂದರ್ಭದಲ್ಲಿ…
ಮುಂಡಗೋಡ : ಸರಳ, ಸಜ್ಜನಿಕೆಗೆ ಹೆಸರಾಗಿದ್ದ ಮುಂಡಗೋಡದ ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ಅವರು ಶನಿವಾರ ಸರಕಾರಿ ಸೇವೆಯಿಂದ ವಯೋ ನಿವೃತ್ತಿಯಾಗಿದ್ದಾರೆ. 34 ವರ್ಷಗಳ ಸರ್ಕಾರಿ ಸೇವೆ ನಿರಂತರವಾಗಿ ಸಾಗಲು ಹಲವರು ಸಲಹೆ ಹಾಗೂ ಸಹಕಾರ ನೀಡಿದ್ದಾರೆ. ಶೈಕ್ಷಣಿಕ ಆಡಳಿತದಲ್ಲಿ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ತಮ್ಮನ್ನು ಬೆಳೆಸಿ, ಸಹಕಾರ ನೀಡಿದವರೆಲ್ಲರಿಗೂ ಜಕಣಾಚಾರಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಮುಂಡಗೋಡ : ಹೊಲಕ್ಕೆ ಹೋಗುವಾಗ ಮಹಿಳೆಯರು ಸೇರಿದಂತೆ ಕೆಲವರ ಮೇಲೆ ಜೇನು ಹುಳುಗಳು ದಾಳಿ ಮಾಡಿದ ಘಟನೆ ಇಂದೂರ ಬಳಿ ಶನಿವಾರ ಸಂಭವಿಸಿದೆ. ಜೇನುಹುಳುಗಳಿಂದ ಗಾಯಗೊಂಡ ಮಹಿಳೆಯರೂ ಸೇರಿದಂತೆ ಐದು ಜನರು ಮುಂಡಗೋಡ ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು : ರಾಜ್ಯ ಬಿಜೆಪಿಯ ಆಂತರಿಕ ಹಾಗೂ ಬಣ ಬಡಿದಾಟ ಇದೀಗ ಬೀದಿಗೆ ಬಂದಿದ್ದು, ಒಂದೆಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರೆ, ಇನ್ನು ಇತ್ತ ಬಿವೈ ವಿಜಯೇಂದ್ರ ಬೆಂಬಲಿಗರಾದಂತಹ ಎಂ.ಪಿ ರೇಣುಕಾಚಾರ್ಯ, ಬಿಸಿ ಪಾಟೀಲ್ ಸೇರಿದಂತೆ ಹಲವರು ಯತ್ನಾಳ್ ವಿರುದ್ಧ ಕಿಡಿ ಕಾರಿದ್ದಾರೆ. ಕಾದು ನೋಡಿ ಯತ್ನಾಳ್ ಪಕ್ಷದಿಂದ ಉಚ್ಚಾಟನೆ ಆಗ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು….
ನವದೆಹಲಿ : ಸಂಬಂಧಗಳು ಮುರಿದು ಬಿದ್ದಾಗ ಮಾನಸಿಕ ಯಾತನೆ ಉಂಟು ಮಾಡಬಹುದಾದರೂ ಆತ್ಮಹತ್ಯೆಗೆ ಪ್ರಚೋದನೆ ಎಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಬ್ಬರ ನಡುವಿನ ದೀರ್ಘಕಾಲದ ಸಂಬಂಧವನ್ನು ಮುರಿಯುವುದನ್ನು ಕ್ರಿಮಿನಲ್ ಘಟನೆಯಾಗಿ ನೋಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಎಂಟು ವರ್ಷಗಳ ಸಂಬಂಧದ ನಂತರ ಯುವತಿಯೊಬ್ಬಳು ತನ್ನನ್ನು ಮದುವೆಯಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಈ ತೀರ್ಪು ನೀಡಿದೆ. ಆರೋಪಿಗಳು ಯುವತಿಯನ್ನು ಆತ್ಮಹತ್ಯೆಗೆ ಪ್ರಚೋದಿಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಸಿಗುವವರೆಗೆ ಆರೋಪಿಯನ್ನು…