Raj Newsline

ಸಿಎಂ ನಾಳೆ ಉತ್ತರಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವರೇ?

ಬೆಳಗಾವಿ : ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಅವರು ಉತ್ತರ ಕನ್ನಡ ಜಿಲ್ಲೆಗೆ ತೆರಳುವರು. ಕಾರನಾರ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದರು. ಇಂದು ಸಂಜೆಯ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ…

Read More

ತುರ್ತಾಗಿ ತಂಡವನ್ನು ಜಿಲ್ಲೆಗೆ ಕಳುಹಿಸುವಂತೆ ಡಿ.ಸಿ.ಎಂ.ಗೆ ಸಚಿವ ಹೆಬ್ಬಾರ್ ಮನವಿ

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ  ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ನೆರೆಯಿಂದ ಜಿಲ್ಲೆಯಾದ್ಯಂತ  ಉಂಟಾಗಿರುವ ಹಾನಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಚಿವರಾದ ಶಿವರಾಮ ಹೆಬ್ಬಾರ್ ಅವರು ನಿನ್ನೆ ಲೋಕೋಪಯೋಗಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಗಳ ಬಗ್ಗೆ ತಿಳಿಸಿ ತುರ್ತಾಗಿ…

Read More

ಕ್ರಿಮಿನಾಶಕ ಸೇವಿಸಿ ಯುವಕನ ಆತ್ಮಹತ್ಯೆ

ಮುಂಡಗೋಡ : ಯುವಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಪ್ರಶಾಂತ ತೆಪ್ಪದವರ್(25) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

Read More

ಜು.28ರವರೆಗೂ ‘ಮಹಾಮಳೆ’ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಜುಲೈ 28 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ನಿರ್ದೇಶಕ C.S. ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಈ 8 ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಎರೋದು ಒಳ್ಳೆಯದು. ಇನ್ನು ಜು.25, 26ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ​ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇನ್ನೂ…

Read More

ಆಗಸ್ಟ್ 2 ರಿಂದ ಸ್ಕೂಲ್ ಶುರು….?

ಬೆಂಗಳೂರು : ಜುಲೈ 26 ರಿಂದ ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಆರಂಭವಾಗಲಿದ್ದು, ಆಗಸ್ಟ್ 2 ರಿಂದ ಶಾಲೆಗಳನ್ನು ಕೂಡ ಆರಂಭಿಸುವ ನಿರೀಕ್ಷೆಯಿದೆ. ಡಾ. ದೇವಿಪ್ರಸಾದ್ ನೇತೃತ್ವದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ವರದಿ ಮತ್ತು ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆಯ ಪ್ರಸ್ತಾವನೆಯಂತೆ ರಾಜ್ಯದಲ್ಲಿ ಆಗಸ್ಟ್ 2 ರಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆ ಇದ್ದು, ಸಿದ್ಧತೆ ಕೈಗೊಳ್ಳಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಉಪನಿರ್ದೇಶಕರುಗಳಿಗೆ ಶಾಲೆಯ…

Read More

ನೆರೆಯಿಂದ ಹಾನಿ ಉಂಟಾದ ಸ್ಥಳಕ್ಕೆ ಸಚಿವ ಹೆಬ್ಬಾರ್ ಭೇಟಿ

ಯಲ್ಲಾಪುರ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಕಳಚೆ ಭಾಗದಲ್ಲಿ ಅಪಾರ ಹಾನಿ ಉಂಟಾಗಿದೆ. ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಕಳಚೆ ಭಾಗದಲ್ಲಿ ನೆರೆಯಿಂದ ಹಾನಿ ಉಂಟಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಸಾರ್ವಜನಿಕರಿಗೆ ನೂತನ ರಸ್ತೆ ಸಂಪರ್ಕ ಕಲ್ಪಿಸುವುದರ ಬಗ್ಗೆ ಹಾಗೂ ಕುಸಿದಿರುವ ಮಣ್ಣನ್ನು ತೆಗೆದು ತಾತ್ಕಾಲಿಕವಾಗಿ ರಸ್ತೆ ನಿರ್ಮಾಣ ಕುರಿತಂತೆ ಗ್ರಾಮಸ್ಥರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಂತ್ರಸ್ತರನ್ನು…

Read More

ಮೈದುಂಬಿದ ಧರ್ಮಾ ಜಲಾಶಯ

ಮುಂಡಗೋಡ : ತಾಲೂಕಿನ ಧರ್ಮಾ ಜಲಾಶಯ ಭರ್ತಿಯಾಗಿದೆ. ಮುಂಡಗೋಡ ತಾಲೂಕಿನಲ್ಲಿ ಯಮಗಳ್ಳಿ ಹಳ್ಳಿ ಬಳಿ 1964ರಲ್ಲಿ ನಿರ್ಮಿಸಲಾಗಿರುವ ಆಣೆಕಟ್ಟು ರೈತರ ಹೊಲಗಳಿಗೆ ನೀರಾವರಿ ಸೌಲಭ್ಯ ಒದಗಿಸಿದೆ. ಧರ್ಮಾ ಜಲಾಶಯ ಮುಂಡಗೋಡ ತಾಲೂಕಿನಲ್ಲಿದ್ದರೂ ಇದರ ಸಂಪೂರ್ಣ ಪ್ರಯೋಜನ ಹಾನಗಲ್ ತಾಲೂಕಿನ ರೈತರಿಗಾಗುತ್ತಿದೆ. ಮುಂಡಗೋಡ ತಾಲೂಕಿನ ನೂರಾರು ಏಕರೆ ಜಮೀನುಗಳಿಗಷ್ಟೇ ಈ ಜಲಾಶಯದ ನೀರು ಪೂರೈಕೆಯಾಗುತ್ತಿದ್ದು, ಹಾನಗಲ್ ತಾಲೂಕಿನ ಸಾವಿರಾರು ಏಕರೆ ಪ್ರದೇಶದ ಜಮೀನುಗಳಿಗೆ ಇದು ನೀರಾವರಿ ಸೌಲಭ್ಯ ಒದಗಿಸಿದೆ. ಈ ಜಲಾಶಯ ತುಂಬಿ ಹರಿಯುವ ಜೊತೆಗೆ ಇದರ ಕೆಳಗಿನ…

Read More