ಲಸಿಕೆ ಪಡೆದರೂ ನೆಗೆಟಿವ್ ವರದಿ ಕಡ್ಡಾಯ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 72 ಗಂಟೆಯೊಳಗಿನ ನೆಗೆಟಿವ್ RTPCR ವರದಿ ಪಡೆದುಕೊಂಡಿರಬೇಕಿದೆ. ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಹಿಂದೆ ಲಸಿಕೆ ಪಡೆದವರಿಗೆ ವಿನಾಯಿತಿ ನೀಡಲಾಗಿತ್ತು. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲಾಗಿದೆ. ಕೇರಳದಲ್ಲಿ ಮೂರನೇ ಅಲೆ ಆತಂಕವನ್ನುಂಟು ಮಾಡಿದೆ. ಪ್ರತಿ ದಿನ 20 ಸಾವಿರಕ್ಕಿಂತ ಅಧಿಕ ಹೊಸ ಪ್ರಕರಣ ವರದಿಯಾಗುತ್ತಿದ್ದು, ಇದರ ಪರಿಣಾಮ…
ತನ್ನ ವಿರುದ್ಧವೇ ತನಿಖೆ ನಡೆಸಲು ಲೋಕಾಯುಕ್ತರಿಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ : ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸಾಮಾನ್ಯ ರಾಜಕಾರಣಿಯ ಲಕ್ಷಣ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ಅರು ಕೋಟಿಯ ಮನೆ ಅಂತಾ ಸುದ್ದಿ ಹರಡಲಾಗುತ್ತಿದ್ದು, ಈಗ ಈ ಎಲ್ಲಾ ವಿಚಾರಗಳಿಗೆ…
ಮುಂದಿನ ಒಂದು ವಾರದೊಳಗೆ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ
ನವದೆಹಲಿ : ರಾಜ್ಯದಲ್ಲಿ ಪ್ರವಾಹ ಮತ್ತು ಕೊರೊನಾ ತೃತೀಯ ಅಲೆಯ ಆತಂಕ ಇರುವುದರಿಂದ ಮುಂದಿನ ಒಂದು ವಾರದೊಳಗೆ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಇಲ್ಲಿಗೆ ಬಂದಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ತ್ವರಿತವಾಗಿ ಸಂಪುಟ ವಿಸ್ತರಣೆ ಮಾಡಬೇಕೆಂದು ಸಂಕ್ಷಿಪ್ತವಾಗಿ…
ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ
ಹುಬ್ಬಳ್ಳಿ : ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಪಕ್ಷದ ಬಾವುಟ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಇನ್ನು ಮಧು ಬಂಗಾರಪ್ಪ ಅವರ…
ಸಚಿವ ಸಂಪುಟ ರಚನೆ ಸುಗಮವಾಗಿ ಸಾಗುತ್ತದೆ : ಸಿಎಂ ಬೊಮ್ಮಾಯಿ ವಿಶ್ವಾಸ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಅವರು ನೀಡುವ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ಹೇಳಲು ಆಗಮಿಸಿರುವ ಬಸವರಾಜ ಬೊಮ್ಮಾಯಿ ಕರ್ನಾಟಕ ಭವನ ಮುಂದೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು…