Raj Newsline

ಕೇಶವ ಕುಂಜಕ್ಕೆ ಸಿಎಂ ಭೇಟಿ

ಹುಬ್ಬಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹುಬ್ಬಳ್ಳಿಯಲ್ಲಿರುವ ಉತ್ತರ ಪ್ರಾಂತ ಕಾರ್ಯಾಲಯ ಕೇಶವ ಕುಂಜಕ್ಕೆ ಇಂದು ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಶ್ರೀ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿಸೂಚಿಸಿದರು ಈ ವೇಳೆ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಜೊತೆಗಿದ್ದರು. ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಮಂಗೇಶ್ ಭೇಂಡೆ, ಶಿವಾನಂದ ಆವಟಿ, ಕಿರಣ ಗುಡ್ಡದಕೇರಿ ಹಾಗೂ ಇತರರು ಉಪಸ್ಥಿತರಿದ್ದರು .

Read More

ಶಿವರಾಮ ಹೆಬ್ಬಾರ್ ಕಾರು ಅಪಘಾತ : ಸಿಎಂ ಭೇಟಿ ವೇಳೆ

ಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ನಿಜ, ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೆ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ. ಅದೃಷ್ಟವಶಾತ್…

Read More

ಮನೆ ಮದ್ದು

ಹಸಿ ಶುಂಠಿ, ಲವಂಗ, ಉಪ್ಪನ್ನು ಬಾಯಲ್ಲಿ ಹಾಕಿಕೊಂಡು ಬರುವ ನೀರನ್ನು ಕುಡಿದರೆ ಗಂಟಲು ಕೆರೆತ ದೂರವಾಗುತ್ತದೆ.

Read More

ಮೋದಿ ಭೇಟಿ ಬಳಿಕ ಸಂಪುಟ ವಿಸ್ತರಣೆ

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು ಮೊದಲ ಬಾರಿಗೆ ಪತ್ರಿಕಾಗೋಷ್ಟಿ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡುತ್ತಾ, ರಾಜ್ಯದ ವಿವಿಧ ವರ್ಗಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಹೊಸ ಶಿಷ್ಯ ವೇತನ ನೀಡಲು 1000 ಕೋಟಿರೂ. ಘೋಷಣೆ ಮಾಡಬೇಕು ಎಂದು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು…

Read More

ಕಾರವಾರಕ್ಕೆ ನಾಳೆ ಸಿಎಂ ಬೊಮ್ಮಾಯಿ

ಬೆಂಗಳೂರು : ಉತ್ತರಕನ್ನಡ ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಣೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಕಾರವಾರಕ್ಕೆ ಆಗಮಿಸಲಿದ್ದಾರೆ. ನೆರೆಯಿಂದಾಗಿ ಹಾನಿಯಾಗಿರುವ ಶಿರೂರು, ಕದ್ರಾ, ಕಳಚೆ ಸೇರಿದಂತೆ ನೆರೆ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

Read More

ಮನೆ ಮದ್ದು

ಕೊತ್ತಂಬರಿ ಬೀಜದ ಚೂರ್ಣವನ್ನು ಜೇನು ತುಪ್ಪದಲ್ಲಿ ಕಲಿಸಿ ನಾಲಿಗೆಯಲ್ಲಿ ದಿನ ಚಪ್ಪರಿಸುತ್ತಿದ್ದರೆ ಬಾಯಿಹುಣ್ಣು ಮಾಯುತ್ತದೆ.

Read More

ಕಾತೂರ ಪಿ.ಡಿ.ಒ. ಹಜೇರಿ ನಿಧನ

ಮುಂಡಗೋಡ : ಕಾತೂರ ಗ್ರಾಮ ಪಂಚಾಯತ ಪಿ.ಡಿ.ಒ. ಸಂತೋಷ ಹಜೇರಿ ಇಂದು ನಿಧನರಾದರು. ಸಂತೋಷ ಹಜೇರಿ ಅವರ ನಿಧನಕ್ಕೆ ತಾಲೂಕ ಪಂಚಾಯತ ಅಧಿಕಾರಿಗಳು ಸಿಬ್ಬಂದಿಗಳು, ಹಲವಾರು ಗಣ್ಯರು, ಜನಪ್ರತಿನಿದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಪ್ರವಾಹದ ಪರಿಸ್ಥಿತಿಯಲ್ಲಿ ಸಿ.ಎಂ. ಬದಲಾವಣೆ ಬೇಕಿರಲಿಲ್ಲ: ಕಾಗೋಡು ತಿಮ್ಮಪ್ಪ

ಸಾಗರ : ‘ರಾಜ್ಯದ ಹೆಚ್ಚಿನ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿರುವ ಕ್ರಮ ಸರಿಯಲ್ಲ’ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಆಡಳಿತದ ಮೇಲೆ ಹಿಡಿತ ಸಾಧಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕುವುದಿಲ್ಲ. ಈ ಕಾರಣಕ್ಕಾದರೂ ಒಂದಷ್ಟು ಕಾಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕಿತ್ತು’ ಎಂದರು. ‘ಬಿಜೆಪಿಯಲ್ಲಿ…

Read More