ಹಾಳಾದ ರಸ್ತೆ ದುರಸ್ತಿ ಮಾಡುವಂತೆ ಜನರ ಆಗ್ರಹ
ಮುಂಡಗೋಡ : ಎರಡು ದಿನ ನಿರಂತರವಾಗಿ ಮಳೆ ಸುರಿದಿದ್ದರಿಂದ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯ ನೀರು ಹರಿದು ಕೆಲವೆಡೆ ರಸ್ತೆ ಕಿತ್ತು ಹೋಗಿದೆ. ಯಲ್ಲಾಪುರ ರಸ್ತೆಯ ಮಾರ್ಗವಾಗಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತದೆ. ಈಗ ಈ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.