ಮೋದಿ ಭೇಟಿ ಬಳಿಕ ಸಂಪುಟ ವಿಸ್ತರಣೆ

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು ಮೊದಲ ಬಾರಿಗೆ ಪತ್ರಿಕಾಗೋಷ್ಟಿ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡುತ್ತಾ, ರಾಜ್ಯದ ವಿವಿಧ ವರ್ಗಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಹೊಸ ಶಿಷ್ಯ ವೇತನ ನೀಡಲು 1000 ಕೋಟಿರೂ. ಘೋಷಣೆ ಮಾಡಬೇಕು ಎಂದು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು…

Read More

ಕಾರವಾರಕ್ಕೆ ನಾಳೆ ಸಿಎಂ ಬೊಮ್ಮಾಯಿ

ಬೆಂಗಳೂರು : ಉತ್ತರಕನ್ನಡ ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಣೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಕಾರವಾರಕ್ಕೆ ಆಗಮಿಸಲಿದ್ದಾರೆ. ನೆರೆಯಿಂದಾಗಿ ಹಾನಿಯಾಗಿರುವ ಶಿರೂರು, ಕದ್ರಾ, ಕಳಚೆ ಸೇರಿದಂತೆ ನೆರೆ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

Read More

ಮನೆ ಮದ್ದು

ಕೊತ್ತಂಬರಿ ಬೀಜದ ಚೂರ್ಣವನ್ನು ಜೇನು ತುಪ್ಪದಲ್ಲಿ ಕಲಿಸಿ ನಾಲಿಗೆಯಲ್ಲಿ ದಿನ ಚಪ್ಪರಿಸುತ್ತಿದ್ದರೆ ಬಾಯಿಹುಣ್ಣು ಮಾಯುತ್ತದೆ.

Read More

ಕಾತೂರ ಪಿ.ಡಿ.ಒ. ಹಜೇರಿ ನಿಧನ

ಮುಂಡಗೋಡ : ಕಾತೂರ ಗ್ರಾಮ ಪಂಚಾಯತ ಪಿ.ಡಿ.ಒ. ಸಂತೋಷ ಹಜೇರಿ ಇಂದು ನಿಧನರಾದರು. ಸಂತೋಷ ಹಜೇರಿ ಅವರ ನಿಧನಕ್ಕೆ ತಾಲೂಕ ಪಂಚಾಯತ ಅಧಿಕಾರಿಗಳು ಸಿಬ್ಬಂದಿಗಳು, ಹಲವಾರು ಗಣ್ಯರು, ಜನಪ್ರತಿನಿದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಪ್ರವಾಹದ ಪರಿಸ್ಥಿತಿಯಲ್ಲಿ ಸಿ.ಎಂ. ಬದಲಾವಣೆ ಬೇಕಿರಲಿಲ್ಲ: ಕಾಗೋಡು ತಿಮ್ಮಪ್ಪ

ಸಾಗರ : ‘ರಾಜ್ಯದ ಹೆಚ್ಚಿನ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿರುವ ಕ್ರಮ ಸರಿಯಲ್ಲ’ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಆಡಳಿತದ ಮೇಲೆ ಹಿಡಿತ ಸಾಧಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕುವುದಿಲ್ಲ. ಈ ಕಾರಣಕ್ಕಾದರೂ ಒಂದಷ್ಟು ಕಾಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕಿತ್ತು’ ಎಂದರು. ‘ಬಿಜೆಪಿಯಲ್ಲಿ…

Read More

4 ಗಂಟೆಗೆ ಬೆಂಗಳೂರಿಗೆ ಜೆ. ಪಿ. ನಡ್ಡಾ ಆಗಮನ

ಬೆಂಗಳೂರು :  ಬಿಜೆಪಿ  ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಮುಂದುವರೆದಿದೆ. ಮಂಗಳವಾರ ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆಗಮಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿವೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಶಾಸಕರ ಜೊತೆ ಸಭೆ ನಡೆಸಲು ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾ ಎಂಬ ಸುದ್ದಿ ಇತ್ತು. ಆದರೆ ಅವರು ತಝಕಿಸ್ತಾನ್ ಪ್ರವಾಸಕ್ಕೆ ತೆರಳಲಿದ್ದಾರೆ. ಶಾಸಕರಿಗೆ…

Read More

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ : ಹೆಬ್ಬಾರ್

ಮುಂಡಗೋಡ : ಮುಂದಿನ ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಇಲ್ಲವಾದರೆ ಶಾಸಕನಾಗ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಯಾವುದೇ ಷರತ್ತು ಹಾಕುವುದಿಲ್ಲ. ಹೈಕಮಾಂಡ್ ನಿರ್ಧಾರಗಳಿಗೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ಮುಂಡಗೋಡನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಹೈಕಮಾಂಡ್ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡುತ್ತದೆ. ರಾಜ್ಯದ ರಾಜಕೀಯ ವಿದ್ಯಮಾನ ಹೈಕಮಾಂಡ್ ನಿಣ೯ಯದಿಂದ ಆಗಿರಬಹುದೆಂಬುದು ನನ್ನ ಅಭಿಪ್ರಾಯ.  ಆದರೆ ಯಾವ ಕಾರಣದಿಂದಾಗಿದೆ ಅಂತಾ…

Read More