ಬೆಂಗಳೂರಿನಲ್ಲಿ ಮತ್ತೆ ಹೆಮ್ಮಾರಿ ‘ಕೊರೊನಾತಂಕ’ : 32 ಏರಿಯಾಗಳಲ್ಲಿ ‘ಡೆಡ್ಲಿ ವೈರಸ್’ ಸ್ಪೋಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಜನರು ನಿಟ್ಟುಸಿರು ಬಿಡುತ್ತಿದ್ದಂತೆ ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾತಂಕ (CORONA VIRUS) ಮನೆ ಮಾಡಿದೆ. ನಗರದಲ್ಲಿ ಒಂದೇ ದಿನ 5 ಅಪಾರ್ಟ್ ಮೆಂಟ್ ಗಳ (APARTEMENT) ನಿವಾಸಿಗಳಲ್ಲಿ ಸೋಂಕು(VIRUS) ಪತ್ತೆಯಾಗಿದ್ದು, ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನ 8 ವಲಯಗಳ 32 ಏರಿಯಾಗಳನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್(MICRO CANTONMENT ZONE) ಗಳೆಂದು ಗುರುತಿಸಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿ ವಲಯ, ಅರಕೆರೆ, ಸಿಂಗಸಂಧ್ರ,…

Read More

ನೂತನ ಸಚಿವರಿಗಾಗಿ ಕಾಯುತ್ತಿವೆ ವಿಧಾನಸೌಧ-ವಿಕಾಸ ಸೌಧ ಕೊಠಡಿಗಳು…..!

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಸಚಿವರ ಮತ್ತು ಅವರ ಕಾರ್ಯದರ್ಶಿಗಳ ಕೊಠಡಿಗಳಿಗೆ ಬೀಗ ಹಾಕಲಾಗಿದೆ, ಸೋಮವಾರ ಎಲ್ಲಾ ಕೊಠಡಿಗಳನ್ನು ಸೀಲ್ ಮಾಡಲಾಗಿದೆ. ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಕಳೆದುಕೊಂಡು ಜುಲೈ 23 2019 ರಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಕೊಠಡಿಗಳನ್ನು ಸೀಲ್ ಮಾಡಲಾಗಿತ್ತು. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡತಗಳನ್ನು ಮತ್ತು ಕಂಪ್ಯೂಟರ್‌ಗಳಂತಹ ಸಾಧನಗಳನ್ನು ಹಸ್ತಾಂತರಿಸಿದ್ದು. ಅವುಗಳನ್ನು ಮಾತೃಇಲಾಖೆಗೆ ವರ್ಗಾಯಿಸಲಾಗಿದೆ. ಸಚಿವರ ಕಾರ್ಯದರ್ಶಿಗಳು…

Read More

ಕೋವಾಕ್ಸಿನ್ ಗೆ ಕೋವಿಡ್-19 ರೂಪಾಂತರ ಡೆಲ್ಟಾ ಪ್ಲಸ್ ತಡೆಯುವ ಸಾಮರ್ಥ್ಯವಿದೆ- ಐಸಿಎಂಆರ್

ನವದೆಹಲಿ: ಸ್ವದೇಶಿ ನಿರ್ಮಿತ ಕೋವಾಕ್ಸಿನ್ ಲಸಿಕೆಗೆ ಕೋವಿಡ್-19 ರೂಪಾಂತರ ಡೆಲ್ಟಾ ಪ್ಲಸ್ ತಡೆಯುವ ಸಾಮರ್ಥ್ಯ ಇರುವುದು ಐಸಿಎಂಆರ್ ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಈವರೆಗೂ ದೇಶದಲ್ಲಿ ಸಾರ್ಸ್ ಕೋವ್-2 ರೂಪಾಂತರವಾದ 70 ಡೆಲ್ಟಾ ಪ್ಲಸ್ ಪ್ರಕರಣಗಳು ಕಂಡುಬಂದಿವೆ. ಕೋವಾಕ್ಸಿನ್ ನ ಮೂರು ಹಂತದ ಕ್ಲಿನಿಕಲ್ ಪ್ರಯೋಗದ ಮಾಹಿತಿಯನ್ನು ಜುಲೈ ತಿಂಗಳಲ್ಲಿ ಬಿಡುಗಡೆ ಮಾಡಿದ್ದ ಭಾರತ್ ಬಯೋಟೆಕ್, ರೋಗಲಕ್ಷಣದ ಕೋವಿಡ್ -19 ಸೋಂಕಿನ ವಿರುದ್ಧ ಒಟ್ಟಾರೆ ಶೇ. 77.8 ರಷ್ಟು ಪರಿಣಾಮಕಾರಿತ್ವವನ್ನು ಪ್ರದರ್ಶಿಸಿದೆ ಎಂದು ಹೇಳಿತ್ತು. ಕಳೆದ ವರ್ಷ ಅಭಿವೃದ್ಧಿಪಡಿಸಲಾದ ಈ…

Read More

ಬೊಮ್ಮಾಯಿ ಸಂಪುಟ ಸೇರಲಿರುವ ಸಂಭವನೀಯರ ಪಟ್ಟಿ

ಬೆಂಗಳೂರು : ರಾಜ್ಯದ ವಿಧಾನಸಭಾ ಶಾಸಕರ ಸಂಖ್ಯೆಗೆ ತಕ್ಕಂತೆ ಒಟ್ಟು 34 ಜನರು ಮಂತ್ರಿಗಳಾಗಬಹುದು. ಈಗಾಗಲೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಇನ್ನು ಉಳಿದಿರುವ 30 ಮಂತ್ರಿ ಸ್ಥಾನಗಳನ್ನು ಒಮ್ಮೆಲೆ ಭರ್ತಿ ಮಾಡಲು ಹೈಕಮಾಂಡ್ ತೀರ್ಮಾನ ಮಾಡಿದೆ. ಇದು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಿಗೆ ಆತಂಕ ಸೃಷ್ಟಿಸಿದೆ. ಈಗ ಮಂತ್ರಿಯಾಗದಿದ್ದರೆ ಉಳಿದ ಎರಡು ವರ್ಷಗಳ ಅವಧಿಯಲ್ಲಿ ಮತ್ತೆ ಮಂತ್ರಿಸ್ಥಾನ ಸಿಗುವುದಿಲ್ಲ ಎಂಬುದು ಶಾಸಕರ ಆತಂಕಕ್ಕೆ ಕಾರಣ. ಬೊಮ್ಮಾಯಿ ಸಂಪುಟ ಸೇರಲಿರುವ ಸಂಭವನೀಯರ…

Read More

ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!

ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕಳೆದ…

Read More

ಕಾರವಾರದ ನೆರೆ ಪೀಡಿತ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ

ಕಾರವಾರ : ತಾಲೂಕಿನ ಕದ್ರಾ ಮಲ್ಲಾಪುರ ಗ್ರಾಮಗಳಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸೋಮವಾರ ಭೇಟಿ ನೀಡಿ, ‌ಪ್ರವಾಹ ಸಂತ್ರಸ್ತರ ಅಳಲು ಆಲಿಸಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್ ಅವರಿಂದ ಪ್ರವಾಹ ಮಾಹಿತಿ ಪಡೆದರು. ಕೆಪಿಸಿ ಜೊತೆ ಸಭೆ: ಕೆಪಿಸಿ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ, ದೇಶಪಾಂಡೆ ಸಭೆ ನಡೆಸಿದರು. ಆರ್.ವಿ.ದೇಶಪಾಂಡೆ ,ಮಾಜಿ ಶಾಸಕ ಸೈಲ್ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಇದ್ದರು.

Read More

ಒಬ್ಬ ಶಾಸಕನು ತಮ್ಮ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ : ಸಿದ್ದರಾಮಯ್ಯ ಆರೋಪ

ಕಾರವಾರ : ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು, ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುವುದರಿಂದ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲಾಗಳಿಗೆ ಹೆಚ್ಚು…

Read More

ಜೆಡಿಎಸ್ ಈಗ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ : ಸಿದ್ದರಾಮಯ್ಯ

ಕಾರವಾರ : ‘ಜೆಡಿಎಸ್ ಈಗ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಜಾತ್ಯತೀತವಾದಕ್ಕೆ ತರ್ಪಣ ಬಿಟ್ಟು ಬಹಳ ದಿನವಾಯ್ತು. ನಾವಿದ್ದಾಗಿನ ಪಕ್ಷ ಅದಲ್ಲ. ಅಲ್ಲಿಂದ ಬೇರೆ ಪಕ್ಷಕ್ಕೆ ಬಂದವರೂ ಜೆಡಿಎಸ್‌ನವರಾಗ್ತಾರಾ? ನಾನು ಅಲ್ಲಿಂದಲೇ ಬಂದವನು, ಆರ್.ವಿ.ದೇಶಪಾಂಡೆ ಜನತಾ ಪಕ್ಷದಿಂದ ಬಂದವರು. ಹಾಗಂತ ನಾವೂ ಈಗ ಆ ಪಕ್ಷದವರು ಹೇಗಾಗ್ತೇವೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಜೆಡಿಎಸ್ ಮೃದು ಧೋರಣೆ ಹೊಂದಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು,…

Read More