ದೇವೇಗೌಡರ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕೆಲಕಾಲ ಜೆಡಿಎಸ್ ವರಿಷ್ಠರ ಜತೆ ಮಾತುಕತೆ ನಡೆಸಿದರು. ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ದೇವೇಗೌಡರ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಶುಭ ಕೋರಿದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಜನತಾ ಪರಿವಾರದ ಹಳೆಯ ನೆನಪುಗಳನ್ನೂ ಮೆಲುಕು ಹಾಕಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.