Home
ಅತಿವೃಷ್ಟಿಯಿಂದ ಹಾನಿಯಾದ ಕಳಚೆ ಭಾಗಕ್ಕೆ ಸಿಎಂ ಭೇಟಿ
ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು. ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ…
ಯಲ್ಲಾಪುರದಲ್ಲಿ ಸಿಎಂ ಗೆ ಸನ್ಮಾನ
ಯಲ್ಲಾಪುರ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಯಲ್ಲಾಪುರ, ಅಂಕೋಲಾ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲು ಇಂದು ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಯಲ್ಲಾಪುರದಲ್ಲಿ ಜನತೆಯ ಪರವಾಗಿ ಮಾಜಿ ಸಚಿವ, ಶಾಸಕ ಶಿವರಾಮ ಹೆಬ್ಬಾರ್ ಸನ್ಮಾನಿಸಿದರು.
ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದರು. ನಿನ್ನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹುಬ್ಬಳ್ಳಿಯಲ್ಲಿ ನನಗೆ…
ಕೇಶವ ಕುಂಜಕ್ಕೆ ಸಿಎಂ ಭೇಟಿ
ಹುಬ್ಬಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹುಬ್ಬಳ್ಳಿಯಲ್ಲಿರುವ ಉತ್ತರ ಪ್ರಾಂತ ಕಾರ್ಯಾಲಯ ಕೇಶವ ಕುಂಜಕ್ಕೆ ಇಂದು ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಶ್ರೀ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿಸೂಚಿಸಿದರು ಈ ವೇಳೆ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಜೊತೆಗಿದ್ದರು. ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಮಂಗೇಶ್ ಭೇಂಡೆ, ಶಿವಾನಂದ ಆವಟಿ, ಕಿರಣ ಗುಡ್ಡದಕೇರಿ ಹಾಗೂ ಇತರರು ಉಪಸ್ಥಿತರಿದ್ದರು .
ಶಿವರಾಮ ಹೆಬ್ಬಾರ್ ಕಾರು ಅಪಘಾತ : ಸಿಎಂ ಭೇಟಿ ವೇಳೆ
ಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ನಿಜ, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೆ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ. ಅದೃಷ್ಟವಶಾತ್…
ಮೋದಿ ಭೇಟಿ ಬಳಿಕ ಸಂಪುಟ ವಿಸ್ತರಣೆ
ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು ಮೊದಲ ಬಾರಿಗೆ ಪತ್ರಿಕಾಗೋಷ್ಟಿ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡುತ್ತಾ, ರಾಜ್ಯದ ವಿವಿಧ ವರ್ಗಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಹೊಸ ಶಿಷ್ಯ ವೇತನ ನೀಡಲು 1000 ಕೋಟಿರೂ. ಘೋಷಣೆ ಮಾಡಬೇಕು ಎಂದು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು…