Home
ಕಾತೂರ ಪಿ.ಡಿ.ಒ. ಹಜೇರಿ ನಿಧನ
ಮುಂಡಗೋಡ : ಕಾತೂರ ಗ್ರಾಮ ಪಂಚಾಯತ ಪಿ.ಡಿ.ಒ. ಸಂತೋಷ ಹಜೇರಿ ಇಂದು ನಿಧನರಾದರು. ಸಂತೋಷ ಹಜೇರಿ ಅವರ ನಿಧನಕ್ಕೆ ತಾಲೂಕ ಪಂಚಾಯತ ಅಧಿಕಾರಿಗಳು ಸಿಬ್ಬಂದಿಗಳು, ಹಲವಾರು ಗಣ್ಯರು, ಜನಪ್ರತಿನಿದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರವಾಹದ ಪರಿಸ್ಥಿತಿಯಲ್ಲಿ ಸಿ.ಎಂ. ಬದಲಾವಣೆ ಬೇಕಿರಲಿಲ್ಲ: ಕಾಗೋಡು ತಿಮ್ಮಪ್ಪ
ಸಾಗರ : ‘ರಾಜ್ಯದ ಹೆಚ್ಚಿನ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿರುವ ಕ್ರಮ ಸರಿಯಲ್ಲ’ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ಆಡಳಿತದ ಮೇಲೆ ಹಿಡಿತ ಸಾಧಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕುವುದಿಲ್ಲ. ಈ ಕಾರಣಕ್ಕಾದರೂ ಒಂದಷ್ಟು ಕಾಲ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕಿತ್ತು’ ಎಂದರು. ‘ಬಿಜೆಪಿಯಲ್ಲಿ…
4 ಗಂಟೆಗೆ ಬೆಂಗಳೂರಿಗೆ ಜೆ. ಪಿ. ನಡ್ಡಾ ಆಗಮನ
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಮುಂದುವರೆದಿದೆ. ಮಂಗಳವಾರ ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆಗಮಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿವೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಶಾಸಕರ ಜೊತೆ ಸಭೆ ನಡೆಸಲು ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾ ಎಂಬ ಸುದ್ದಿ ಇತ್ತು. ಆದರೆ ಅವರು ತಝಕಿಸ್ತಾನ್ ಪ್ರವಾಸಕ್ಕೆ ತೆರಳಲಿದ್ದಾರೆ. ಶಾಸಕರಿಗೆ…
ಹೈಕಮಾಂಡ್ ತೀರ್ಮಾನಕ್ಕೆ ಬದ್ಧ : ಹೆಬ್ಬಾರ್
ಮುಂಡಗೋಡ : ಮುಂದಿನ ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಇಲ್ಲವಾದರೆ ಶಾಸಕನಾಗ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಯಾವುದೇ ಷರತ್ತು ಹಾಕುವುದಿಲ್ಲ. ಹೈಕಮಾಂಡ್ ನಿರ್ಧಾರಗಳಿಗೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ಮುಂಡಗೋಡನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಹೈಕಮಾಂಡ್ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡುತ್ತದೆ. ರಾಜ್ಯದ ರಾಜಕೀಯ ವಿದ್ಯಮಾನ ಹೈಕಮಾಂಡ್ ನಿಣ೯ಯದಿಂದ ಆಗಿರಬಹುದೆಂಬುದು ನನ್ನ ಅಭಿಪ್ರಾಯ. ಆದರೆ ಯಾವ ಕಾರಣದಿಂದಾಗಿದೆ ಅಂತಾ…
ರಕ್ತದಾನ ಶಿಬಿರ ನಾಳೆ
ಮುಂಡಗೋಡ : ಇನ್ನರ್ ವೀಲ್ ಕ್ಲಬ್ ಮುಂಡಗೋಡ ಮತ್ತು ರೋಟರಿ ಕ್ಲಬ್ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ದಿ.27ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಶಶಿರೇಖಾ ಬೈಜು ಮತ್ತು ಕಾರ್ಯದರ್ಶಿ ಸಂಗೀತಾ ಬಾಡಕರ ತಿಳಿಸಿದ್ದಾರೆ.
ಅಭಿನಯ ಶಾರದೆ ಜಯಂತಿ ಇನ್ನಿಲ್ಲ
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅಭಿಯನ ಶಾರದೆ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ವೈ,ಅರ್,ಸ್ವಾಮಿ ನಿರ್ದೇಶನದ ‘ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ಕಮಲ ಕುಮಾರಿ.ಅದಕ್ಕಿಂತ ಮುನ್ನ…