ಅನಧಿಕೃತ ಚಿರೇಕಲ್ಲು ಕ್ವಾರಿಗಳ ಮೇಲೆ ಅಧಿಕಾರಿಗಳ ದಾಳಿ
ಭಟ್ಕಳ : ತಾಲೂಕಿನ ಮಾರುಕೇರಿ ಪಂಚಾಯತಿ ವ್ಯಾಪ್ತಿಯ ಕೋಟಖಂಡದಲ್ಲಿ ಅನಧಿಕೃತವಾಗಿ ಕೆಂಪುಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡ ಮತ್ತು ಭಟ್ಕಳ ಕಂದಾಯ ಇಲಾಖೆಯ ತಂಡ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರುಕೇರಿ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ಕೆಂಪುಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಕುರಿತು ಗಣಿ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡ ಮತ್ತು ಭಟ್ಕಳ ಕಂದಾಯ ಇಲಾಖೆಯ ತಂಡ ದಾಳಿ ನಡೆಸಿದೆ….