ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
ಕಾರವಾರ : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 7 ರಿಂದ ಜುಲೈ 11ರವರೆಗೂ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ಹವಾಮಾನ ವರದಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.