ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ, ತಂಬಾಕು ಸೇವಿಸಿದರೆ ಶಿಸ್ತು ಕ್ರಮ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ.ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿದೆ. ಹೌದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ…

Read More

‘ಮುಖ್ಯಮಂತ್ರಿಯಾಗಿ’ ನಾನೆ ಮುಂದುವರಿಯುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ!

ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ ಅಂದುಕೊಂಡಿದ್ದಾರೆ. ಆದರೆ ಆಶೀರ್ವಾದ ಇರುವವರೆಗೂ ನನ್ನನ್ನು…

Read More

ಸರ್ ಎಂ ವಿಶ್ವೇಶ್ವರಯ್ಯ ಓದಿದ ಸರ್ಕಾರಿ ಶಾಲೆಯೂ ‘ವಕ್ಫ್ ಆಸ್ತಿ’ ಎಂದು ಉಲ್ಲೇಖ: ಗ್ರಾಮಸ್ಥರಿಂದ ಆಕ್ರೋಶ

ಚಿಕ್ಕಬಳ್ಳಾಪುರ: ಮಿನಿ ವಿಧಾನಸೌಧ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ ವಿವಾದದ ಬೆನ್ನಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅವರು ಓದಿದಂತ ಸರ್ಕಾರಿ ಶಾಲೆಯ ಭೂಮಿ ಕೂಡ ವಕ್ಫ್ ಗೆ ಸೇರಿದ್ದು ಎಂಬುದಾಗಿ ಪಹಣಿಯಲ್ಲಿ ನಮೂದಿಸಲಾಗಿದೆ. ಇದರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರು ಹೋದಿದ್ದು. ಈ ಸರ್ಕಾರಿ ಶಾಲೆಯ ಹೆಸರಿನಲ್ಲಿದ್ದಂತ ಸರ್ವೆ ನಂಬರ್ 1ರಲ್ಲಿನ 19 ಗುಂಟೆ ಜಾಗ ಕೂಡ…

Read More

ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?

ಬೆಳಗಾವಿ : ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು. ರುದ್ರಣ್ಣ ಸಾವಿನ ಘಟನೆ…

Read More

ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ತನಿಖೆಯಲ್ಲಿ ಕರ್ತವ್ಯಲೋಪವೆಸಗಿದ್ರೆ ಶಿಸ್ತು ಕ್ರಮ : ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ!

ಬೆಂಗಳೂರು : ಮಾನ್ಯ ನ್ಯಾಯಾಲಯದಲ್ಲಿ ಬಿಡುಗಡೆ ಹೊಂದಿದ ಪ್ರಕರಣಗಳಲ್ಲಿ Acquittal Review Committee ಸಮಿತಿಯು ಶಿಫಾರಸ್ಸಿನ ಆಧಾರದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ತನಿಖೆಯಲ್ಲಿ ಕರ್ತವ್ಯಲೋಪವೆಸಗಿರುವ ಬಗ್ಗೆ ಶಿಸ್ತು ಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಅಪರಾಧ ಮೊಕದ್ದಮೆಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿಗಳು ಸಲ್ಲಿಸಲ್ಪಟ್ಟ ನಂತರ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಹೊರಡಿಸುತ್ತಿರುವ ಅನೇಕ ತೀರ್ಪುಗಳಲ್ಲಿ ವಿವಿಧ ವೃಂದದ ಅಧಿಕಾರಿ/ಸಿಬ್ಬಂದಿಗಳು…

Read More

‘ಧರ್ಮಸ್ಥಳ ಸಂಘ’ದಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿಲ್ಲ, ‘ಬ್ಯಾಂಕ್’ನಷ್ಟೇ ವಿಧಿಸಲಾಗುತ್ತಿದೆ: ಯೋಜನಾಧಿಕಾರಿ ಶಾಂತಾ ನಾಯ್ಕ ಸ್ಪಷ್ಟನೆ

ಶಿವಮೊಗ್ಗ: ಧರ್ಮಸ್ಥಳ ಸಂಘದಿಂದ ಹೆಚ್ಚಿನ ಬಡ್ಡಿದರವನ್ನು ವಸೂಲಿ ಮಾಡಲಾಗುತ್ತಿದೆ ಎಂಬುದೆಲ್ಲ ಸುಳ್ಳು. ಅಲ್ಲದೇ ಯಾರಿಗೂ ಕಿರುಕುಳ ಕೂಡ ನೀಡುತ್ತಿಲ್ಲ. ಬ್ಯಾಂಕ್ ಎಷ್ಟು ಬಡ್ಡಿ ದರದಲ್ಲಿ ಸಾಲಸೌಲಭ್ಯ ನೀಡುತ್ತಿದೆಯೋ ಅಷ್ಟೇ ವಿಧಿಸಲಾಗುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುವ ಸುದ್ದಿ ಸುಳ್ಳು ಎಂಬುದಾಗಿ ಸಾಗರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಾಂತಾ ನಾಯ್ಕ್ ಸ್ಪಷ್ಟ ಪಡಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ 90,40,00,000 ಸಾಲಸೌಲಭ್ಯ ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾಗರ ತಾಲ್ಲೂಕು ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ…

Read More

ಮುಡಾ ಹಗರಣ : ಲೋಕಾಯುಕ್ತದಲ್ಲಿ ಸತತ 2 ಗಂಟೆ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸುತ್ತಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು…

Read More

ಜಮೀರ್ ಹುಚ್ಚಾಟ ನಡೆಸಿದರೆ ಪಾಕಿಸ್ತಾನಕ್ಕೆ ಓಡಿಸುತ್ತೇವೆ ಹುಷಾರ್ : ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ : ವಕ್ಫ್ ಬೋರ್ಡ್ ವತಿಯಿಂದ ರೈತರಿಗೆ ನೋಟಿಸ್ ನೀಡಿದ ವಿಚಾರವಾಗಿ, ಇಂದು ರಾಜ್ಯಾದ್ಯಂತ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಇದೆ ವಿಚಾರವಾಗಿ ದಾವಣಗೆರೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು, ಜಮೀರ್ ಹುಚ್ಚಾಟ ನಡೆಸಿದರೆ ಪಾಕಿಸ್ತಾನಕ್ಕೆ ಓಡಿಸುತ್ತೇವೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟ ತುಘಲಕ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಅಲ್ಪಸಂಖ್ಯಾತರ ವಿರುದ್ಧ ಹೋರಾಟ ಅಲ್ಲ. ಇದು ಹಕ್ಕುಗಳಿಗಾಗಿ ಹೋರಾಟ.ರೈತರು…

Read More

ವಕ್ಫ್ ನೋಟಿಸ್: ನ.6 ಮತ್ತು 7ರಂದು ಕರ್ನಾಟಕಕ್ಕೆ JPC ಭೇಟಿ

ಬೆಂಗಳೂರು: ಕರ್ನಾಟಕದಾದ್ಯಂತ ವಕ್ಫ್ ಆಸ್ತಿ ನೋಟಿಸ್ ಜಾರಿ ಮಾಡಿರುವ ಬಗ್ಗೆ ಆತಂಕದ ನಡುವೆಯೇ ಈ ವಿಷಯ ಈಗ ಕೇಂದ್ರ ಸರ್ಕಾರಕ್ಕೆ ತಲುಪಿದೆ. ವಕ್ಫ್ ಕಾಯ್ದೆ ತಿದ್ದುಪಡಿಗೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ನವೆಂಬರ್ 6 ಮತ್ತು 7ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ. ಸಮಿತಿಯ ಸದಸ್ಯರಾಗಿರುವ ಸಂಸದ ತೇಜಸ್ವಿ ಸೂರ್ಯ ಅವರು ಈ ಹಿಂದೆ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದು ರಾಜ್ಯದ ರೈತರ ಕುಂದುಕೊರತೆಗಳನ್ನು ಆಲಿಸುವಂತೆ ಸಮಿತಿಯನ್ನು ಒತ್ತಾಯಿಸಿದ್ದರು. ಅವರ ಮನವಿಯ ಮೇರೆಗೆ…

Read More

ರಾಜ್ಯ ಸರ್ಕಾರದ ಲ್ಯಾಂಡ್ ಜಿಹಾದ್, ವಕ್ಫ ಅಕ್ರಮವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಮುಂಡಗೋಡ : ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ ಅಕ್ರಮವನ್ನು ವಿರೋಧಿಸಿ ಸೋಮವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಪ್ರತಿಭಟನೆಕಾರರು ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಎಂ.ಎಲ್.ಸಿ. ಶಾಂತಾರಾಮ, ಜಿ.ಪಂ. ಮಾಜಿ ಸದಸ್ಯ ಎಲ್.ಟಿ.ಪಾಟೀಲ, ತಾಲೂಕಾ ಬಿಜೆಪಿ ಅಧ್ಯಕ್ಷರಾದ ಮಂಜುನಾಥ ಪಾಟೀಲ, ಅಶೋಕ ಚಲವಾದಿ, ಮಹೇಶ ಹೊಸಕೊಪ್ಪ, ಪ್ರಕಾಶ ಬಡಿಗೇರ, ಬಸವರಾಜ ಟಣಕೆದಾರ, ಡಿ.ಎಫ್.ಮಡ್ಲಿ, ನಿಂಗಜ್ಜ ಕೋಣನಕೇರಿ, ಸಂತೋಷ…

Read More