
ಮುಂಡಗೋಡ : ಸಿದ್ದಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ಮುಂಡಗೋಡ ತಾಲೂಕಿನ ಮೈನಳ್ಳಿಯ ಸರಕಾರಿ ಪ್ರೌಢಶಾಲೆಯ ಬಾಲಕರ, ಬಾಲಕಿಯರು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಶಾಲೆಗೆ, ಊರಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ರಫೀಕ ಅಹ್ಮದ ಮುಜಾವರ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸಿ.ಕೆ.ವಿಜಯ, ಶಾಲೆಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮೈನಳ್ಳಿಯ ಸರಕಾರಿ ಪ್ರೌಢಶಾಲೆಯ ಬಾಲಕರು, ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.