
ವರದಿ : ಬಸವೇಂದ್ರಯ್ಯ(ಶಶಿಧರ) ಕುಲಕರ್ಣಿ
ಮುಂಡಗೋಡ : ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಕ್ಕಮಹಾದೇವಿ ಗಾಣಿಗೇರ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೊದಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಪಟಗಾರ ಕಲಬುರ್ಗಿ ಆಯುಕ್ತಾಲಯದಲ್ಲಿ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿದ್ದಾರೆ.
ಅಕ್ಕಮಹಾದೇವಿ ಗಾಣಿಗೇರ ಕಲಘಟಗಿ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹಶಿಕ್ಷಕಿ ಮತ್ತು ಪ್ರಭಾರ ಮುಖ್ಯ ಶಿಕ್ಷಕಿಯಾಗಿ ನಂತರ ತಾಲೂಕಿನ ಹುನಗುಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಅಭಿನಂದನೆ : ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಅಕ್ಕಮಹಾದೇವಿ ಗಾಣಿಗೇರ ಅವರಿಗೆ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ ಅಂಬಿಗೇರ, ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.