ದಿ. 12 ರಂದು ಮುಂಡಗೋಡ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ

Spread the love

ಮುಂಡಗೋಡ : ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ದಿ.12, ಸೋಮವಾರ ಮುಂಜಾನೆ 10 ಗಂಟೆಗೆ ಬಸವೇಶ್ವರ ದೇವಸ್ಥಾನ, ಬಸವಬೀದಿ, ಮುಂಡಗೋಡದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
 ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ ಹಿನ್ನೆಲೆಯಲ್ಲಿ, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಅಭಿಯಾನ ಹಾಗೂ ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ಕುರಿತು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಕಾರಣ, ಆಸಕ್ತ ಅರಣ್ಯ ಅತಿಕ್ರಮಣದಾರರು ಮುಂಡಗೋಡ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಗೆ ಹಾಜರಾಗಲು ರವೀಂದ್ರ ನಾಯ್ಕ ಕೋರಿದ್ದಾರೆ.