ಮುಂಡಗೋಡ : ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳಿಂದ ಬದುಕು ಹಸನಾಗುತ್ತದೆ. ಇಂದು ಕಲಿತದ್ದು ನಾಳೆ ಕೈ ಹಿಡಿಯುತ್ತದೆ ಎಂದು ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ಹೇಳಿದರು.
ಶುಕ್ರವಾರ ಅವರು ಶಿರಸಿ ತಾಲೂಕಿನ ಕಲ್ಲಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿಶೇಷ ಆಮಂತ್ರಿತರಾಗಿ ಆಗಮಿಸಿ ಮಾತನಾಡಿದರು.
ವಿಶೇಷ ಆಮಂತ್ರಿತರಾಗಿ ಆಗಮಿಸಿದ ಸಾಹಿತಿ, ಪ್ರೋ.ಎಚ್.ಆರ್.ಅಮರನಾಥ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನ ಪ್ರಿನ್ಸಿಪಾಲರಾದ ಈಶ್ವರ ಎಲ್. ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮವನ್ನು ಉಂಚಳ್ಳಿ ಗ್ರಾ.ಪಂ. ಅಧ್ಯಕ್ಷರಾದ ದೇವೇಂದ್ರ ನಾಯ್ಕ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಂಚಳ್ಳಿ ಗ್ರಾ.ಪಂ.ಸದಸ್ಯರಾದ ಅರುಣ ನಾಯ್ಕ ಅವರು, ವಿದ್ಯಾರ್ಥಿಗಳಲ್ಲಿ ಸಾಹಿತಿಕ ಮನೋಭಾವ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಮನಮುಟ್ಟುವಂತೆ ಮಾತನಾಡಿದರು.
ವೇದಿಕೆಯಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಪ್ರಿನ್ಸಿಪಾಲರಾದ ರಾಘವೇಂದ್ರ ನಾಯ್ಕ, ಇಟಗಿ ಗ್ರಾ.ಪಂ. ಉಪಾಧ್ಯಕ್ಷೆ ಪಾರ್ವತಿ ನಾಯ್ಕ ಉಪಸ್ಥಿತರಿದ್ದರು.
ಉಪನ್ಯಾಸಕರಾದ ದೀಪಿಕಾ ಬಿ.ಜಿ., ಮಣಿಕಂಠ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಮಮತಾ ನಾಯ್ಕ ಸ್ವಾಗತಿಸಿ, ವರದಿ ವಾಚನ ಮಾಡಿದರು.
ಸಾಯಂಕಾಲ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಈಶ್ವರ ವಹಿಸಿದ್ದರು. ಉಪನ್ಯಾಸಕರಾದ ಮಣಿಕಂಠ ಹಾಗೂ ಮಮತಾ ನಾಯ್ಕ, ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ರಾಜಶೇಖರ ನಾಯ್ಕ, ಇಟಗಿ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಪಾರ್ವತಿ ನಾಯ್ಕ ಉಪಸ್ಥಿತರಿದ್ದು, ಬಹುಮಾನ ವಿತರಿಸಿದರು.
ನಂತರ ನಡೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿತು.