ಬೆಂಗಳೂರು: ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಬಜೆಟ್ ನಲ್ಲಿ ಜನ ಕಲ್ಯಾಣಕ್ಕಾಗಿ ಹೆಚ್ಚು ಒತ್ತು ನೀಡಲು ಚಿಂತನೆ ನಡೆಸಲಾಗಿದೆ.
ಇನ್ನು ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ಎಂದು ತಿಳಿದುಬಂದಿದೆ.
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.