ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಉಚಿತ; ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ ಘೋಷಣೆ

Spread the love

ಹಾಸನ: ಕಾಂಗ್ರೆಸ್‌ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ಈ ವೇಳೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಲೇಬೇಕು.

ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತವಾಗಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ.

ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಕುಟುಂಬದ ಹಿರಿಯ ಮಹಿಳೆಗೆ ತಿಂಗಳಿಗೆ ₹ 2 ಸಾವಿರ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್​ ವಿದ್ಯುತ್ ಕೊಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದ್ದಾರೆ.