
ಬೆಂಗಳೂರು : ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 2 ರವರೆಗೆ ವಿಸ್ತರಿಸಲಾಗಿದೆ.
ವಸತಿ ಶಾಲೆಗಳ ಪ್ರವೇಶಕ್ಕೆ ಈ ಮೊದಲು ಜನವರಿ 22 ವರೆಗೆ ಅವಕಾಶ ನೀಡಲಾಗಿತ್ತು.
ಆದರೆ ಪ್ರವೇಶದ ಅವಧಿಯನ್ನು ವಿಸ್ತರಿಸಬೇಕು ಎಂದು ಪೋಷಕರಿಂದ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ವಸತಿ ಶಾಲೆ ಪ್ರವೇಶಕ್ಕೆ ಫೆಬ್ರವರಿ 2 ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.
