ಮುಂಡಗೋಡ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಂತರ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ ಮಾತನಾಡಿ, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿತ್ತು. ಮೋದಿ ಸರ್ಕಾರ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿಸಿದೆ. ಇದರಿಂದ ಕೃಷಿಕರು ಕಾರ್ಮಿಕ ವರ್ಗ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಪೆಟ್ರೋಲ್, ಡಿಸೇಲ್ ಬೆಲೆ ತಿಳಿಸುವಂತೆ ಆಗ್ರಹಿಸಿದರು.
ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ಎಂ.ಎನ್.ದುಂಡಶಿ, ಪಟ್ಟಣ ಪಂಚಾಯತ್ ಸದಸ್ಯರಾದ ಮಹಮ್ಮದ್ ಗೌಸ್ ಮಕಾನದಾರ, ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮರಾಜ ನಡಗೇರಿ, ಮುಂಡಗೋಡ ನಗರ ಅಧ್ಯಕ್ಷ ಆಲೆಹಸನ ಬೆಂಡಿಗೇರಿ, ಜೈನು ಬೆಂಡಿಗೇರಿ, ಇರ್ಫಾನ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು