
ಬೆಂಗಳೂರು: ಮುಂಬರುವಂತ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಮತ್ತೊಂದೆಡೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುವವ ಸಂಖ್ಯೆಯೂ ಹೆಚ್ಚಾಗಿದೆ.
ಇದೇ ವೇಳೆ ಸಚಿವ ವಿ.ಸೋಮಣ್ಣ ( Minister V Somanna ) ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಎನ್ನಲಾಗುತ್ತಿದೆ. ಮಾರ್ಚ್ 27ರಂದು ಕಾಂಗ್ರೆಸ್ ಪಕ್ಷವನ್ನು ( Congress Party ) ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು, ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸೋ ವಿಚಾರವನ್ನು ಅರಿತಂತ ಕಾಂಗ್ರೆಸ್ ನಾಯಕರೊಬ್ಬರು ತಮಗೆ ನೀಡಿದ್ದಂತ ಜವಾಬ್ಧಾರಿಗೆ ರಾಜೀನಾಮೆ ನೀಡಿದ್ದರು.
ಈ ಬೆನ್ನಲ್ಲೇ ಸಚಿವ ವಿ.ಸೋಮಣ್ಣ ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳೋದಕ್ಕೆ ಕೆಪಿಸಿಸಿ ನಾಯಕರು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎನ್ನಲಾಗಿದೆ. ಮಾರ್ಚ್ 27ರಂದು ಅಧೃತವಾಗಿ ಸಚಿವ ಸೋಮಣ್ಣ ಕೈ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಇಂದು ಬಿಜೆಪಿ ಎಂಎಲ್ಸಿಯಾಗಿದ್ದಂತ ಬಾಬುರಾವ್ ಚಿಂಚನಸೂರ್ ಅವರು, ಪಕ್ಷಕ್ಕೆ ಗುಡ್ ಬೈ ಹೇಳಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ಈ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಸಚಿವ ವಿ.ಸೋಮಣ್ಣ ಕೂಡ ಮಾರ್ಚ್ 27ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.