ಚಿಕ್ಕಬಳ್ಳಾಪುರ: ಯುಗಾದಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ನಿಷೇಧವಿದ್ದರೂ ಜೂಜಾಟದಲ್ಲಿ ಜನರು ತೊಡಗುತ್ತಾರೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಹೀಗೆ ಹಬ್ಬದ ವೇಳೆ ಜೂಜಾಟದಲ್ಲಿ ತೊಡಗಿದ್ದಂತ ಓರ್ವ ಹೆಡ್ ಕಾನ್ಸ್ ಸ್ಟೇಬಲ್ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ.
ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿಯಲ್ಲಿ ಜೂಜಾಟದಲ್ಲಿ ಜನರು ತೊಡಗಿದ್ದಾರೆ ಎಂಬುದಾಗಿ ಸಿಪಿಐ ಕೆ.ಪಿ ಸತ್ಯನಾರಾಯಣಗೆ ಖಚಿತ ಮಾಹಿತಿ ಬಂದಿತ್ತು. ಈ ಮಾಹಿತಿ ಹಿನ್ನಲೆಯಲ್ಲಿ ಸಾಗಾನಹಳ್ಳಿಯಲ್ಲಿರುವಂತ ತೋಟದ ಮನೆಯ ಮೇಲೆ ದಾಳಿಯನ್ನು ನಡೆಸಿದ್ದಾರೆ.
ಈ ದಾಳಿಯ ವೇಳೆಯಲ್ಲಿ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಖಲಂದರ್, ನಗರ ಸಭಾ ಸದಸ್ಯ ಆರ್ ಪಿ ಗೋಪಿನಾಥ್ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೇ 1.50 ಲಕ್ಷ ಹಣವನ್ನು ಜಪ್ತಿ ಮಾಡಿ, ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 50 ಲಕ್ಷ ಹಣ ಜಪ್ತಿ
ಕಲಬುರಗಿ : ಕಲಬುರಗಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 50 ಲಕ್ಷ ಹಣವನ್ನು ಪೊಲೀಸರು ಹಾಗೂ ತಹಶೀಲ್ದಾರ್ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಜೇವರ್ಗಿ ತಾಲೂಕಿನ ಚಿಗರಹಳ್ಖಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದ ಹಣ ವಶಕ್ಕೆ ಪಡೆಯಲಾಗಿದೆ. ಪೊಲೀಸರು ಹಾಗೂ ತಹಶೀಲ್ದಾರ್ ಕಾರ್ಯಾಚರಣೆ ನಡೆಸಿ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಲಬುರಗಿ ಜಿಲ್ಲೆಯ ಯಾದವ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಯಾದಗಿರಿ ಜಿಲ್ಲೆ ಶಹಾಪುರದಿಂದ ಕಲಬುರಗಿ ಕಡೆ ತೆರಳುತ್ತಿತ್ತು ಎನ್ನಲಾಗಿದೆ.