
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸುವುದಕ್ಕೆ ಅವರ ಪಕ್ಷದವರೇ ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಾಕಷ್ಟು ನೀವುಗಳನ್ನು ಅನುಭವಿಸಿದ್ದಾರೆ.
ಹೀಗಾಗಿ ಅವರನ್ನು ಸೋಲಿಸಲು ಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ಯಾಕೆಂದರೆ ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಅಭ್ಯರ್ಥಿಗೆ ಕ್ಷೇತ್ರವೇ ಸಿಗುತ್ತಿಲ್ಲ ಅಂದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಈ ರೀತಿಯ ಸ್ಥಿತಿ ಬರಬಾರದಿತ್ತು. ಈ ರೀತಿ ಗೊಂದಲ ಸೃಷ್ಟಿ ಮಾಡಿದ್ದು ಅವರ ಪಕ್ಷದವರೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್ಡಿಕೆ, ಅವರ ಪಕ್ಷದಲ್ಲೇ ಅವರನ್ನು ರಾಜಕೀಯವಾಗಿ ಮುಗಿಸುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.