
ಬೆಂಗಳೂರು : ಕರ್ನಾಟಕ ಸಿಎಂ ಬೊಮ್ಮಾಯಿ ‘ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ‘ ಶಿವಸೇನೆ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಮಾತನಾಡುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ವರದಿಯಾಗಿದೆ
ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಮಾತನಾಡಿ, ಕರ್ನಾಟಕದ ಗಡಿಭಾಗದಲ್ಲಿರುವ 865 ಹಳ್ಳಿಗಳಿಗೆ 54 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಈ ಹಿಂದೆ ಹೇಳಿದ್ದರು .
ಆದರೆ ಉಭಯ ರಾಜ್ಯಗಳಲ್ಲಿ ಒಂದೇ ಪಕ್ಷದ ಸರ್ಕಾರ ಇದೆ. ನಾವು ನಮ್ಮ ಜನರಿಗೆ ಅನುದಾನ ನೀಡುತ್ತಿದ್ದೇವೆ. ಅದನ್ನು ಕರ್ನಾಟಕ ಸಿಎಂ ಅವರು ಎಂದೂ ಪ್ರಶ್ನೆ ಮಾಡಿಲ್ಲ. ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿಯ ದಾದಾಗಿರಿ ಹೆಚ್ಚಾಗಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿ, ಮರಾಠಿ ಮಾತನಾಡಲು ಬಿಡುತ್ತಿಲ್ಲ. ಈ ಕುರಿತು ಸುಪ್ರೀಂಕೋರ್ಟ್ನಲ್ಲಿ ಕೇಸ್ ಇನ್ನು ಬಾಕಿ ಇದೆ. ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ತಕ್ಕ ಉತ್ತರ ನೀಡಬೇಕು ಎಂದು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ನಡೆಸುವ ವೇಳೆ ಶಿವಸೇನೆ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಹೇಳಿದ್ದಾರೆ.