ಕರ್ನಾಟಕ ವಿಧಾನಸಭೆ ಚುನಾವಣೆ : ಮಾ.26 ರಂದು ‘ಜೆಡಿಎಸ್’ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : H.D ಕುಮಾರಸ್ವಾಮಿ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ ಈಗಾಗಲೇ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಾ.26 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಮಾ.26 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಜೆಡಿಎಸ್ ಏನೂ ಕಳಪೆಯಿಲ್ಲ, 15 ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಸಮಸ್ಯೆ ಇದೆ. ಅಂತಹ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷದಿಂದ ಬರ್ತಾರೆ. ಇದುವರೆಗೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ಘೋಷಣೆ ಆಗಿಲ್ಲ ಎಂದರು.

ಮುಂದಿನ 2-3ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಡಿ.ಕೆ ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡಿಕೊಂಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಮುಂದಿನ ಮುಂದಿನ ಎರಡು ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ ಎಂದು ಸ್ಪಷ್ಟನೆ ನೀಡಿದ್ದಾರೆ.