
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ನಂತರ ಪ್ರಧಾನಿ ಮೋದಿ ಭಾಷಣ ಮಾಡಿದ್ದು, ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರ ಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.
ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆಒಂದು ಮಾದರಿಯಾಗಿದೆ. ಸರ್. ಎಂ ವಿಶ್ವೇಶ್ವರಯ್ಯ ಸ್ಮಾರಕ ಈ ನೆಲೆದಲ್ಲಿ ಇದೆ. ಸರ್. ಎಂ ವಿಶ್ವೇಶ್ವರಯ್ಯ ಸ್ಮಾರಕ ದರ್ಶನ ಪಡೆದಿದ್ದೇನೆ. ಸ್ಮಾರಕ ದರ್ಶನ ಪಡೆದಿರುವುದು ನನ್ನ ಪುಣ್ಯ ಎಂದು ಹೇಳಿದ್ದಾರೆ.
ಇನ್ನು ಕಡಿಮೆ ಸಮಯದಲ್ಲಿ ಭಾರತ ಅಭಿವೃದ್ಧಿ ಹೊಂದಿದೆ. ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಯತ್ನ ಮಾಡುತ್ತಿದೆ. ಸಾಮಾಜಿಕ ಸಂಗಟನೆಗೂ ಸರ್ಕಾರ ಶ್ರಮ ವಹಿಸುತ್ತಿದೆ. ದಲಿತರು ಬಡವರು ಎಲ್ಲಾ ವರ್ಗದ ಜನರ ಸಶಕ್ತೀಕರಣಕ್ಕೆ ಒತ್ತು ನೀಡಲಾಗಿದೆ. ದೇಶದಲ್ಲಿ ಇತ್ತೀಚೆಗೆ ಮೆಡಿಕಲ್ ಕಾಲೇಜುಗಳ ಅಭಿವೃದ್ಧಿಯಾಗಿದೆ. ಜಿಲ್ಲಾ ಕೇಂದ್ರಗಳಲ್ಲೂ ಮೆಡಿಕಲ್ ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿಯಾಗಿದೆ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣ ಮಾಡಲಾಗಿದೆ. ಸಾಯಿಬಾಬಾ ಜೊತೆ ನನಗೆ ನಿಕಟ ಸಂಬಂಧವಿತ್ತು ಎಂದು ಹೇಳಿದ್ದಾರೆ
ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡ ರೋಗಗಿಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಇನ್ಮುಂದೆ ಕೂಡ ಯೋಜನೆಯಿಂದ ರೋಗಿಗಳಿಗೆ ಸಾಕಷ್ಟು ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.