ಶಿರಸಿ : ಶಿರಸಿಯ ಜೆ.ಡಿ.ಎಸ್. ಕಚೇರಿಯಲ್ಲಿ ನಾಳೆ ದಿ.25ರಂದು ಬೆಳಿಗ್ಗೆ 11.30ಗಂಟೆಗೆ ಜೆ.ಡಿ.ಎಸ್.ಜಿಲ್ಲಾಮಟ್ಟದ ಚುನಾವಣಾ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಜೆ.ಡಿ.ಎಸ್. ಜಿಲ್ಲಾ ಕಾರ್ಯಾಧ್ಯಕ್ಷರಾದ ಮುನಾಫ ಮಿರ್ಜಾನಕರ ತಿಳಿಸಿದ್ದಾರೆ.
ಈ ಸಭೆಗೆ ರಾಜ್ಯ ಜೆ.ಡಿ.ಎಸ್. ವಕ್ತಾರರು ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯಾದ ಎಂ.ಬಿ.ಸದಾಶಿವ ಹಾಗೂ ರಾಜ್ಯ ಉಪಾಧ್ಯಕ್ಷರಾದ ಫಯಾಜ್ ಅಹ್ಮದ್ ಹಾಗೂ ರಾಜ್ಯದ ಹಿರಿಯ ಮುಖಂಡರುಗಳು, ಉತ್ತರಕನ್ನಡ ಜಿಲ್ಲೆಯ 6 ವಿಧಾನಸಭಾಕ್ಷೇತ್ರದ ಅಭ್ಯರ್ಥಿಗಳು ಈ ಸಭೆಗೆ ಆಗಮಿಸಲಿದ್ದಾರೆ. ಆದ್ದರಿಂದ ಎಲ್ಲಾ ತಾಲೂಕಧ್ಯಕ್ಷರು, ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಗೆಲುವಿಗೆ ಸಲಹೆ ಸೂಚನೆ ನೀಡಬೇಕೆಂದು ಮುನಾಫ ಮಿರ್ಜಾನಕರ್ ಕೋರಿದ್ದಾರೆ.