ಮುಂಡಗೋಡ : ಬಿಜೆಪಿ ಪಕ್ಷದ ಹಿರಿಯ ಮುಖಂಡರು ಹಾಗೂ ಪಟ್ಟಣ ಪಂಚಾಯತ ಸದಸ್ಯರಾದ ಫಣಿರಾಜ ಹದಳಗಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿ.ಎಸ್.ಪಾಟೀಲ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಬಿಜೆಪಿ ಮುಖಂಡರ ನಿರ್ಲಕ್ಷ ಭಾವನೆಯಿಂದ ಆಕ್ರೋಶಗೊಂಡಿರುವ ಫಣಿರಾಜ ಹದಳಗಿ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.
ನಾಳೆ ಮಂಗಳವಾರದಿಂದ ಪಟ್ಟಣದಲ್ಲಿ ತಮ್ಮ ಅಭಿಮಾನಿ ಪಡೆಯೊಂದಿಗೆ ಬಹಿರಂಗ ಪ್ರಚಾರ ಮಾಡಲು ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ.
ಫಣಿರಾಜ ಹದಳಗಿ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡಿದರೆ ಬಿಜೆಪಿಯ ನಾಗಾಲೋಟಕ್ಕೆ ಕಡಿವಾಣ ಬೀಳಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ.