`ಸರ್ವಜನಾಂಗದ ಶಾಂತಿಯ ತೋಟ’ ಘೋಷವಾಕ್ಯದೊಂದಿಗೆ `ಕಾಂಗ್ರೆಸ್ ಪ್ರಣಾಳಿಕೆ’ ಬಿಡುಗಡೆ : ಇಲ್ಲಿವೆ ಮಹತ್ವದ ಘೋಷಣೆಗಳು

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ ಸಮುದಾಯದ, ಎಲ್ಲ ವರ್ಗದವರ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ನಮ್ಮ ಮುಖಂಡರ ಜೊತೆಗೆ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ಸರ್ವಜನಾಂಗದ ಶಾಂತಿಯ ತೋಡ ಕಾಂಗ್ರೆಸ್ ಬದ್ಧತೆ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.

ಬಿಎಪಿಲ್ ಕಟುಂಬಕ್ಕೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.ನೀಡಲಾಗುವುದು, ಯುವನಿಧಿ, ನಿರುದ್ಯೋಗ ಭತ್ಯೆ, ಪದವೀಧರರಿಗೆ 3,000 ರೂ. ಡಿಪ್ಲೋಮಾ ಪಡೆದವರಿಗೆ 1,500 ರೂ. ನೀಡುವುದಾಗಿ ಎಂದು ಹೇಳಿದ್ದಾರೆ.