ನಾಳೆ ಅಂಕೋಲಾಕ್ಕೆ ಪ್ರಧಾನಿ ಮೋದಿ, 3ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ : ಸಚಿವ ಶಿವರಾಮ ಹೆಬ್ಬಾರ್

Spread the love

ಅಂಕೋಲಾ : ಅಂಕೋಲಾದಲ್ಲಿ ನಾಳೆ ನಡೆಯುವ ಬಿ.ಜೆ.ಪಿ. ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಸಮಾವೇಶಕ್ಕೆ 3ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ ಹೇಳಿದರು.

ಇಂದು ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಈ ಸಮಾವೇಶಕ್ಕೆ ಭದ್ರತೆ ಸೇರಿದಂತೆ ಅಗತ್ಯ ಸಿದ್ದತೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವರೂ ಹಾಗೂ ಯಲ್ಲಾಪುರ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಶಿವರಾಮ ಹೆಬ್ಬಾರ ಹೇಳಿದರು.