ಹನುಮ ಭಕ್ತರು ಸಿಡಿದು ನಿಂತರೇ ಕಾಂಗ್ರೆಸ್ ಪಕ್ಷವನ್ನು ಈ ದೇಶದಿಂದ ಕಿತ್ತೆಸೆಯುತ್ತಾರೆ : ಸಿಎಂ ಬೊಮ್ಮಾಯಿ ಕಿಡಿ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಬಜರಂಗದಳ ಸಂಘಟನೆ ನಿಷೇಧದ ಕುರಿತಂತೆ ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ ಚಟುವಟಿಕೆ ನಡೆಸುವ ಪಿ.ಎಫ್.ಐ ಜೊತೆ ಧರ್ಮ, ಪರಂಪರೆ ಹಾಗೂ ಇತಿಹಾಸವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಭಜರಂಗದಳವನ್ನು ತುಲನೆ ಮಾಡುವುದು ದೊಡ್ಡ ಅಪರಾಧ. ಆದರೇ ಕಾಂಗ್ರೆಸ್ ಇಂತಹ ತಪ್ಪು ಮಾಡಿ, ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ಹೇಳಿದೆ. ಹನುಮ ಭಕ್ತರು ಸಿಡಿದು ನಿಂತರೇ, ಈಗಾಗಲೇ ಅವಸಾನದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಈ ದೇಶದಿಂದ ಕಿತ್ತೆಸೆಯುತ್ತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ದಕ್ಷಿಣದ ಅಂಜನಾದ್ರಿಯಲ್ಲಿ ಶ್ರೀ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯವಾಗಿದೆ ಎಂದು ಹೇಳಿದ್ದಾರೆ.