ಒಂದೇ ದಿನ ಮೂರು ಬೈಕ್ ಅಪಘಾತಗಳು..!

Spread the love

ಮುಂಡಗೋಡ : ತಾಲೂಕಿನ ವಡಗಟ್ಟಾ ಚೆಕ್ ಪೋಸ್ಟ್ ಬಳಿ ಇಂದು ಬೈಕ್ ಅಪಘಾತವಾದ ಪರಿಣಾಮವಾಗಿ ಸವಾರಿನ ಕಾಲಿನ ಮೂಳೆ ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.

ನಿರಂಜನ ಅಮ್ಮಿನಗಡ ಎಂಬ ಹೆಸರಿನ ಬೈಕ್ ಸವಾರನು ಕುಷ್ಟಗಿಯಿಂದ ಮಣಿಪಾಲಕ್ಕೆ ಹೊರಟಿದ್ದ ಎನ್ನಲಾಗಿದೆ.

ಇದ್ದಾಗಿ ಕುಳಿತು ಗಾಯಗೊಂಡ ನಿರಂಜನವನ್ನು 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ, ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ-2

ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

ದೇವರಾಜ ಭದ್ರಾಪುರ ಎಂಬಾತನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ.

ಗಾಯಾಳು ಬೈಕ್ ಸವಾರನನ್ನು 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ , ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ-3

ಚಲಿಸುತ್ತಿದ್ದ ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬಳು ನಿಯಂತ್ರಣ ತಪ್ಪಿ ಕೆಳಗೆ ಬಿದ್ದು, ಗಾಯಗೊಂಡ ಘಟನೆ ಇಂದು ಮುಂಡಗೋಡ ತಾಲೂಕಿನ ಆಲಳ್ಳಿ ಬಳಿ ಸಂಭವಿಸಿದೆ.

ಮಹಿಳೆಯ ತಲೆಗೆ ಗಾಯವಾಗಿದ್ದು, 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಕಾತೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿದೆ. ಗಾಯಗೊಂಡ ಮಹಿಳೆಯನ್ನು ಫರೀದಾಬಿ ಎಂದು ಗುರುತಿಸಲಾಗಿದ್ದು, ಶಿಗ್ಗಾಂವ ತಾಲೂಕಿನ ಅಂದಲಗಿ ಗ್ರಾಮದವರಾಗಿದ್ದಾರೆ.