ಬೆಂಗಳೂರು : ಮಹಾರಾಷ್ಟ್ರ ಮತ್ತು ಕೇರಳಗಳಿಂದ ರಾಜ್ಯಕ್ಕೆ ಬರುವವರು ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಡೆಲ್ಟಾ+ ಹೆಚ್ಚಿರುವ ಮಹಾರಾಷ್ಟ್ರ ಕೇರಳಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಇರಿಸಲಾಗುತ್ತದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಹತ್ತು ವರ್ಷದೊಳಗಿನ ಮಕ್ಕಳ ಹೆತ್ತವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು. ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿ, ಪೊಲೀಸರ ಕುಟುಂಬದವರು, ಮಾಧ್ಯಮದವರಿಗೂ ಆದ್ಯತೆ ನೀಡಲಾಗುವುದು ಎಂದರು.