2-3 ವಾರದಲ್ಲಿ ಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗುವುದು : ಪ್ರಿಯಾಂಗಾ

Spread the love

ಮುಂಡಗೋಡ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವರ ವಿಡಿಯೋ ಕಾನ್ಪರೇನ್ಸನಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗ ಭಾಗವಹಿಸಿ ನಂತರ ಪತ್ರಕರ್ತರ ಜೊತೆ ಮಾತನಾಡುತ್ತಾ, 2-3ವಾರಗಳಲ್ಲಿ ಬರುವ ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುವುದು. ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 128 ಕೇಂದ್ರಗಳಲ್ಲಿ ಸುಮಾರು ಇಪ್ಪತ್ತು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಡಳಿತದಿಂದ ತಯಾರು ಮಾಡಲಾಗುತ್ತಿದೆ. ಹಾಸ್ಟೇಲ್‍ನಲ್ಲಿರುವ ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗುವುದು ಹಾಗೂ ಪರೀಕ್ಷೆಗೆ ಬರುವ ಶಿಕ್ಷಕರಿಗೆ ಆರ್‍ಟಿಪಿಸಿಆರ್ ಪರೀಕ್ಷೆ ಹಾಗೂ ಕೋವಿಡ್ ಲಸಿಕೆಯ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷೆಗೆ ಬೇಕಾಗುವ ಎಲ್ಲ  ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀಯಾಂಗ್ ತಿಳಿಸಿದರು.