ಬೆಂಗಳೂರು : ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸಿ.ಎಂ. ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಇವೆರಡು ಯೋಜನೆಗಳ ಕುರಿತಾಗಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಬಿ.ಎಸ್.ಯಡಿಯೂರಪ್ಪ ಎತ್ತಿನಹೊಳೆ ಯೋಜನೆಯಲ್ಲಿ ಈವರೆಗೆ 9003.86 ಕೋಟಿರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.