
ಮುಂಡಗೋಡ : ಮುಸ್ಲೀಮ ಬಾಂಧವರು ಇಂದು ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.
ಬೆಳಿಗ್ಗೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಮುಸ್ಲೀಮ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ತ್ಯಾಗ-ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ-ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಲವಾರು ಗಣ್ಯರು ಹಾರೈಸಿದ್ದಾರೆ.
