
ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ತಡೆ ಆದೇಶ ವಾಪಸ್ ಪಡೆದುಕೊಂಡಿದೆ. ಈ ಬಗ್ಗೆ ಇತ್ತೀಚಿಗೆ ಗುತ್ತಿಗೆದಾರರು ಸಿಎಂ ಅವರನ್ನು ಭೇಟಿ ಮನವಿ ಮಾಡಿಕೊಂಡಿದ್ದರು, ಅದರಂತೆ ರಾಜ್ಯ ಸರ್ಕಾರ ಈ ಬಗ್ಗೆ ಈಗ ಬಿಲ್ ತಡೆ ಆದೇಶ ವಾಪಸ್ ಪಡೆದು ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ
ಎಲ್ಲಾ ಇಲಾಖೆಗಳು ಕಾಮಗಾರಿಗಳಿಗೆ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರೆದ ಸಂಬಂಧಿಸಿದಂತ ಬಿಲ್ಲುಗಳ ನೈಜತೆಯನ್ನು ಹಾಗೂ ನಿಯಮಾನುಸಾರವಿರುವುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವುದು. ಎಲ್ಲಾ ಶಾಸನಬದ್ಧ ಪಾವತಿಗಳನ್ನು ಹಾಗೂ ಬಾಹ್ಯ ನೆರವಿನ ಮುಂದುವರೆದ ಯೋಜನೆಗಳಿಗೆ ಸಂಬಂಧಿಸಿದಂತ ಹಣ ಬಿಡುಗಡ/ಪಾವತಿಗಳನ್ನು ಮಾಡುವುದು.ಮುಂದುವರಿದ ಕಾರ್ಯಕ್ರಮ/ಯೋಜನೆಗಳಿಗೆ ಸಂಬಂಧಿಸಿದಂತೆ ಸರಕು ಮತ್ತುಸೇವೆಗಳ ಸಂಗ್ರಹಣೆಗಳ ಸಂಬಂಧ ಹಣ ಬಿಡುಗಡೆ ಮಾಡಬಹುದಾಗಿದೆ. ಪ್ರಾರಂಭವಾಗದಿರುವ ಕಾಮಗಾರಿಗಳ ಬಗ್ಗೆ ಸುತ್ತೋಲೆಯಲ್ಲಿನ ನಿರ್ದೇಶನಗಳು ಮುಂದುವರೆಯುತ್ತವೆ ಅಂತ ತಿಳಿಸಿದೆ.