
ಮಡಿಕೇರಿ : ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ, ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ಯೋಜನೆಯಿಂದ ಜನರು ಬಹಳ ಗೊಂದಲದಲ್ಲಿದ್ದಾರೆ.
ಬೆಲೆ ಏರಿಕೆಗೂ ಮೋದಿ ಕೇಳಿ ಅಂತಾರೆ, ಬೆಲೆ ಏರಿಸಿದ್ದು ಮೋದಿನಾ..? ಬೆಲೆ ಏರಿಕೆಗೆ ನೇರ ಕಾರಣ ಸಿದ್ದರಾಮಯ್ಯ ಅವರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.
ರಾಜ್ಯ ಸರ್ಕಾರ ತಂದಿರುವ ಯೋಜನೆಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಈ ಸರ್ಕಾರ ಬಹಳ ದಿನ ನಡೆಯಲ್ಲ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.