ರಾಜ್ಯದ ಕರಾವಳಿ ಭಾಗದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

Spread the love

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಜುಲೈ 20 ರವರೆಗೆ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ20 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್ ನಲ್ಲಿ ಜುಲೈ 20 ರಿಂದ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.