ಬಿಜೆಪಿ ಬೀಳುತ್ತಿರುವ ಮನೆ: ಕಾಂಗ್ರೆಸ್‌ ಸೇರಲು ಬಸವರಾಜ ಬೊಮ್ಮಾಯಿಗೆ ಎಂಬಿಪಾ ಬುಲಾವ್?

Spread the love

ಬೆಂಗಳೂರು : ಬಿಜೆಪಿಯು ಕುಸಿಯುತ್ತಿರುವ ಮನೆಯಾಗಿದೆ. ಬಸವರಾಜ ಬೊಮ್ಮಾಯಿ ಅವರು ಜಾತ್ಯತೀತ ಸಿದ್ಧಾಂತಕ್ಕೆ ಹೊಂದಿಕೊಂಡರೆ, ಕಾಂಗ್ರೆಸ್ ಹೈಕಮಾಂಡ್ ಅವರನ್ನು ಪರಿಗಣಿಸಬಹುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಗೆ ಪರೋಕ್ಷವಾಗಿ ಆಹ್ವಾನಿಸಿ ಲೇವಡಿ ಮಾಡಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಟ್ವೀಟ್ ಮಾಡಿರುವ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು, ಬಿಜೆಪಿ ಬೀಳುತ್ತಿರುವ ಕಾರ್ಡ್‌ಗಳ ಮನೆಯಾಗಿದೆ ಎಂದು ವಿಧಾನಸಭೆ ಚುನಾವಣೆಯಲ್ಲಿ ಸೋತ ಹಾಗೂ ವಿರೋಧ ಪಕ್ಷದ ನಾಯಕನನ್ನು ಈವರೆಗೆ ಆಯ್ಕೆ ಮಾಡದ ಬಿಜೆಪಿ ವಿರುದ್ಧ ಕುಟುಕಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅಂತಿಮವಾಗಿ ಅನಗತ್ಯ ಮಾಡಲು ನಿರ್ಧರಿಸಲಾಗಿದೆ ಎಂದು ತೋರುತ್ತದೆ. ಪಕ್ಷದಲ್ಲಿ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಬಿಎಸ್ ಯಡಿಯೂರಪ್ಪ ಅವರಿಗಾದಂತೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಲಿಂಗಾಯತ ನಾಯಕರೊಬ್ಬರು ವಿಪಕ್ಷ ಲಿಂಗಾಯತರಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಸೇರಲು ಬಯಸಿದರೆ ನನ್ನದೊಂದು ಒತ್ತಾಯ

ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಸೇರಲು ಬಯಸಿದರೆ ಅವರಿಗೆ ನಾನು ಒತ್ತಾಯ ಮಾಡುತ್ತೇನೆ. ಬೊಮ್ಮಾಯಿಯವರು ಜಾತ್ಯತೀತ ಸಿದ್ಧಾಂತಕ್ಕೆ ಹೊಂದಿಕೊಂಡರೆ, ಕಾಂಗ್ರೆಸ್ ಹೈಕಮಾಂಡ್ ಅವರನ್ನು ಪರಿಗಣಿಸಬಹುದು ಎಂದು ಪೊರೋಕ್ಷ ಆಹ್ವಾನ ನೀಡಿದ ಸಚಿವ ಎಂಬಿ ಪಾಟೀಲ್ ಟೀಕಿಸಿದ್ದಾರೆ.

ಇನ್ನೂ ಶೀಘ್ರದಲ್ಲೇ ಜೆಡಿಎಸ್ LoP ಆಗಿದ್ದಕ್ಕೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಕಾಲೆಳೆದಿದ್ದಾರೆ. ಈಗಾಗಲೇ ಕಾಂಗ್ರೆಸ್ ಜತೆಗಿನ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ಬಿಜೆಪಿಯತ್ತ ಜೆಡಿಎಸ್ ಒಲವು ವ್ಯಕ್ತಪಡಿಸಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಒಂದೆರಡು ಸೀಟು ಗೆಲ್ಲಬಹುದು ಎಂದು ತೀರ್ಮಾನಿಸಿದೆ.

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಬಿಎಸ್ ಯಡಿಯೂರಪ್ಪ ಅವರು ಲಿಂಗಾಯತ ನಾಯಕರು. ಈ ಸಾಲಿಗೆ ಬಸವರಾಜ ಬೊಮ್ಮಾಯಿ ಸೇರಿದ್ದು, ಈ ಪೈಕಿ ಶೆಟ್ಟರ್ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಕಾಂಗ್ರೆಸ್ ನಲ್ಲಿನ ಲಿಂಗಾಯತ ಕಾಂಗ್ರೆಸ ನಾಯಕರಾದ ಸಚಿವ ಎಂ.ಬಿ ಪಾಟೀಲ್ ವಿಪಕ್ಷದವರ ಕಾಲೆಳೆದಿದ್ದಾರೆ.