ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ಡಿಕೆಶಿ ವಿರುದ್ದದ ಪ್ರಕರಣದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ಮತ್ತೆ ವಿಸ್ತರಣೆ

Spread the love

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮೂರು ವಾರಗಳ ಕಾಲ ವಿಸ್ತರಿಸಿ ವಿಚಾರಣೆ ಮುಂದೂಡಿದೆ.

ರಾಜ್ಯ ಸರ್ಕಾರ ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿ ಆದೇಶಿಸಿತ್ತು. ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಾಗಿ, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು. ಅಲ್ಲದೇ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶಿಸಿತು.