
ಬೆಂಗಳೂರು: ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಅನುದಾನ ತಡೆದ ಹಿಡಿದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಮೂರು ವಿಷಯ ಪ್ರಸ್ತಾಪಿಸಿ ದೇವಸ್ಥಾನ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಡೆ ಹಿಡಿದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ಇನ್ನೂ ಇದೇ ವೇಳೆ ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ತಿಳಿಸಿದ್ದು, ಒಂದು ವೇಳೆ ಇನ್ನು ಶೇ.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿಯುವಂಥೆ ಕೂಡ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಇದಲ್ಲದೇ ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆ ಹಿಡಿಯಬೇಕಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಈ ನಡುವೆ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುವ ಬಗ್ಗೆ ಕೂಡ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋಟ್ಯಾಂತರ ಲಾಭ ತಂದುಕೊಡುವ ಅನೇಕ ದೇವಾಸ್ಥಾನಗಳಿದ್ದು, ಅವುಗಳ ಹಣವನ್ನು ಹಿಂದೂ ಧಾರ್ಮಿಕ ದೇವಾಲಗಳಿಗೆ ವಿನಿಯೋಗ ಮಾಡಿಕೊಳ್ಳಬೇಕೆ ಹೊರತು ಅನ್ಯ ಕಾರ್ಯಗಳಿಗೆ ಅವುಗಳ ಬಳಕೆ ಮಾಡುವುದು ಸಲ್ಲದು, ಅದನ್ನು ಹೊರತು ಪಡಿಸಿ ಹೀಗೆ ಅನುದಾನವನ್ನು ತಡೆ ಹಿಡಿಯುವುದು ಸರಿ ಅಲ್ಲ ಅಂಥ ತಿಳಿಸಿದ್ದಾರೆ.