

ಮುಂಡಗೋಡ : ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆಯೊಂದು ಮುಂಡಗೋಡ ತಾಲೂಕಿನ ಇಂದೂರ ಗ್ರಾಮದಲ್ಲಿ ಇಂದು ಸಂಭವಿಸಿದೆ. ಸುರೇಶ್ ಮುಗಳಿಕಟ್ಟಿ ಎಂಬಾತನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕನಾಗಿದ್ದಾನೆ.
108 ಸಿಬ್ಬಂದಿಗಳಾದ ಧನರಾಜ್ ಸಿ ಮತ್ತು ಕೆಂಚೇಶ ಅವರು ಗಾಯಾಳುಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.