ಮುಂಡಗೋಡ: ತಾಲೂಕ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಮೀಸಲಾತಿ ಪ್ರಕಟಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ತೀವ್ರ ಚಟುವಟಿಕೆ ಆರಂಭಗೊಂಡಿದೆ.
ಕಾಂಗ್ರೆಸ್ ಪಕ್ಷವು ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ತಯಾರಿ ನಡೆಸಿದೆ. ಇತ್ತೀಚೆಗಷ್ಟೇ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸಿದೆ. ಬಿಜೆಪಿ ಸಹ ಚುನಾವಣೆ ಚಟುವಟಿಕೆ ಬಿರುಸುಗೊಳಿಸಿದೆ. ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷಿಗಳು ತಮ್ಮ ಕ್ಷೇತ್ರದಲ್ಲಿ ಜನಸಂಪರ್ಕ ಆರಂಭಿಸಿದ್ದಾರೆ. ತಾಲೂಕಿನಲ್ಲಿ ಜೆಡಿಎಸ್ ಇಷ್ಟು ದಿನ ಮೌನವಾಗಿತ್ತು. ಆದರೆ ಕೆಲದಿನಗಳ ಹಿಂದೆ ಜೆ.ಡಿ.ಎಸ್.ನವರು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ, ಚುನಾವಣೆಗೆ ನಾವೂ ರೆಡಿ ಎಂದು ಪರೋಕ್ಷವಾಗಿ ಹೇಳಿದಂತಿದೆ. ಕೆಲ ಕ್ಷೇತ್ರದಲ್ಲಿ ಆಕಾಂಕ್ಷಿಗಳಿಗೆ ಮೀಸಲಾತಿ ಕೈತಪ್ಪಿದ್ದಕ್ಕೆ ಬೇಸರಗೊಂಡಿದ್ದಾರೆ. ಅವರೆಲ್ಲ ಮೀಸಲಾತಿ ವಿರುದ್ಧ ನ್ಯಾಯಾಲಯಕ್ಕೆ ಹೋಗುವ ತಯಾರಿ ನಡೆಸಿದ್ದಾರೆ.