ಬಿಜೆಪಿ-ಜೆಡಿಎಸ್ ಮೈತ್ರಿ : ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರಲ್ಲಿ ಅಸಮಾಧಾನ ಸ್ಪೋಟ

Spread the love

ರಾಮನಗರ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಪಕ್ಷದಲ್ಲಿ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ರಾಮನಗರದಲ್ಲೂ ಜೆಡಿಎಸ್ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಮುಖಂಡರ ಅಸಮಾಧಾನ ಶಮನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.

ಬಿಡದಿ ತೋಟದ ಮನೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ ಸಭೆಯಲ್ಲಿ ರಾಮನಗರ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.ಎಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ರಾಜೀನಾಮೆ ನೀಡಿದ್ದು, ಕಾರ್ಯಕರ್ತರ ಹಾಗೂ ಮುಖಂಡರ ಅಸಮಾಧಾನ ಶಮನಕ್ಕೆ ಇತ್ತೀಚಿಗೆ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸಭೆ ಏರ್ಪಡಿಸಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಲಾಯಿತು.

ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದು, ಇದೇ ಅಕ್ಟೋಬರ್ 16 ರಂದು ಅವರ ರಾಜಕೀಯ ನಡೆಯ ಕುರಿತು ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.