ಶಿವಮೊಗ್ಗ ಈದ್​ ಮಿಲಾದ್ ಗಲಾಟೆ ಪ್ರಕರಣ : ಮೂವರು ಕಾನ್ಸ್​ಟೇಬಲ್​ಗಳ ಅಮಾನತು

Spread the love

ಶಿವಮೊಗ್ಗ:ಈದ್​ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾನ್ಸ್​ಟೇಬಲ್​ಗಳನ್ನು ಅಮಾನತ್ತು ಮಾಡಿ ಶಿವಮೊಗ್ಗ ಗ್ರಾಮಾಂತರ ವೃತ್ತ ನಿರೀಕ್ಷಕ ಅಭಯ ಪ್ರಕಾಶ್ ಆದೇಶಿಸಿದ್ದಾರೆ. ಶಿವಮೊಗ್ಗ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್​​ ವರದಿ ಆಧರಿಸಿ ಕಾಶಿನಾಥ್, ರಂಗನಾಥ, ಶಿವರಾಜ್ ಅಮಾನತುಗೊಳಿಸಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ವಾಹನಗಳನ್ನು ತಪಾಸಣೆ ಮಾಡಲಾಯಿತು.

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದರು. ಯಾರೋ ಕಿಡಿಗೇಡಿಗಳು ಮನೆಗಳು ಮತ್ತು ಪೊಲಿಸರ ಮೇಲೆ ಕಲ್ಲು ಎಸೆದಿದ್ದರು.ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಶಾಂತಿನಗರದಲ್ಲಿ ಲಘು ಲಾಠಿಚಾರ್ಜ್​ ಮಾಡಿದ ವೇಳೆ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.