

ಶಿರಸಿ: ನಗರದಲ್ಲಿ ಇಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು.
ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ.ದೇಶಪಾಂಡೆ, ಮುಖಂಡರಾದ ಪ್ರಶಾಂತ ದೇಶಪಾಂಡೆ, ರವೀಂದ್ರ ನಾಯ್ಕ, ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ, ಜಿಲ್ಲಾ ಕಾಂಗ್ರೆಸ ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು. ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿರಸಿ ಮಾರಿಕಾಂಬೆದೇವಿಗೆ ಪೂಜೆ ಸಲ್ಲಿಸಿದರು.