ಮುಂಡಗೋಡ: ಶಿರಸಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದರು.
ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದರು. ಡಿಕೆಶಿ ಬರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ದರು.
ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದರು. ಹಾರ ಹಾಕಿ ಸನ್ಮಾನಿಸಿದರು. ಕೆಲಹೊತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ಡಿಕೆಶಿ ಅವರು ಮುಂದೆ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಮುಖಂಡರಾದ ಎನ್.ಎಮ್. ದುಂಡಸಿ, ಪಟ್ಟಣ ಪಂಚಾಯತ ಸದಸ್ಯರಾದ ಮಹಮ್ಮದ್ ಗೌಸ ಮಕಾನದಾರ,ಎಮ್.ಕೆ.ರಜಾ, ಅಲೆಹಸನ್ ಬೆಂಡಿಗೇರಿ, ಲಕ್ಷ್ಮಣ ಬನ್ಸೋಡೆ, ಧರ್ಮರಾಜ ನಡಗೇರಿ, ಜೈನು ಬೆಂಡಿಗೇರಿ ಮುಂತಾದವರು ಇದ್ದರು.